×
Ad

ಉಡುಪಿ: ಛಾಯಾಗ್ರಾಹಕರಿಗೆ ಸಹಾಯಹಸ್ತ ನೀಡಲು ಎಸ್‌ಕೆಪಿಎ ಆಗ್ರಹ

Update: 2020-03-29 21:56 IST

ಉಡುಪಿ, ಮಾ. 29: ಕೊರೋನದಿಂದಾಗಿ ಸೌತ್ ಕೆನರಾ ಫೋಟೋ ಗ್ರಾಫರ್ಸ್ ಅಸೋಷಿಯೇಶನ್ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ಸುಮಾರು 3224 ಛಾಯಾಗ್ರಾಹಕರು ಅತಂತ್ರ ಸ್ಥಿತಿಯಲ್ಲಿದ್ದು, ತುಂಬಾ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಇವರಿಗೆ ಸಹಾಯವಾಗುವಂತಹ ಕಾರ್ಯಕ್ರಮವನ್ನು ಸರಕಾರ ಹಮ್ಮಿಕೊಳ್ಳಬೇಕು ಎಂದು ಅಸೋಸಿಯೇಶನ್ ಒತ್ತಾಯಿಸಿದೆ.

ಈಗಾಗಲೇ ಬುಕ್ ಆಗಿರುವ ನೂರಾರು ಮದುವೆ ಹಾಗು ಶುಭ ಸಮಾ ರಂಭಗಳು ನಮ್ಮ ಕೈ ತಪ್ಪಿದ್ದು, ಇದರಿಂದ ಜೀವನ ನಿರ್ವಹಿಸಲು ಕಷ್ಟವಾಗಿದೆ. ಆದುದರಿಂದ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು ಗಳಾದ ಎಸ್.ಆರ್.ಬೊಮ್ಮಾಯಿ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಇತ್ತ ಗಮನ ಹರಿಸಿ ಛಾಯಾಗ್ರಾಹಕರಿಗೆ ಸಹಾಯವಾಗುವಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ಈ ಸಂದಿಗ್ದ ಪರಿಸ್ಥಿಯಲ್ಲಿ ಈ ಕ್ಷೇತ್ರಕ್ಕೆ ಅನುಕೂಲ ಮಾಡಿಕೊಡಬೇಕು ಎಂದು ಅಸೋಸಿಯೇಶನ್ ಅಧ್ಯಕ್ಷ ಕರಂದಾಡಿ ಶ್ರೀಧರ ಶೆಟ್ಟಿಗಾರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News