ನಂಜನಗೂಡಿನಲ್ಲಿ ಮತ್ತೆ ನಾಲ್ವರಲ್ಲಿ ಕೊರೋನ ದೃಢ: ಸಂಸದ ಪ್ರತಾಪ್ ಸಿಂಹ

Update: 2020-03-30 05:29 GMT

ಮೈಸೂರು, ಮಾ.30: ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿನ ಮತ್ತೆ ನಾಲ್ವರಲ್ಲಿ ಕೊರೋನ ಸೋಂಕು ದೃಢಪಟ್ಟಿದೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಫೇಸ್‌ಬುಕ್ ಲೈವ್‌ನಲ್ಲಿ ರವಿವಾರ ಮಾತನಾಡಿರುವ ಅವರು, ನಂಜನಗೂಡಿನ ಜ್ಯುಬಿಲಿಯಂಟ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿರುವ ಓರ್ವ ವ್ಯಕ್ತಿಯಲ್ಲಿ ಕೊರೋನ ಸೋಂಕು ಪತ್ತೆಯಾಗಿತ್ತು. ಆತನ ಜೊತೆಯಲ್ಲಿದ್ದ 11 ಮಂದಿಯನ್ನು ಪರೀಕ್ಷೆಗೊಳಪಡಿಸಿದಾಗ ಐವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಮತ್ತೆ ಇನ್ನೂ ನಾಲ್ವರಲ್ಲಿ ಕೊರೋನ ಸೋಂಕು ದೃಢಪಟ್ಟಿದ್ದು ಸದ್ಯವೇ ಜಿಲ್ಲಾಧಿಕಾರಿ ಅಧಿಕೃತ ಘೋಷಣೆ ಮಾಡಲಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

ಶಂಕಿತರ ಸ್ಯಾಂಪಲ್ ವರದಿ ಬಂದಿಲ್ಲ: ಆರೋಗ್ಯ ಇಲಾಖೆ
ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯಲ್ಲಿನ ಮತ್ತೆ ನಾಲ್ವರಲ್ಲಿ ಕೊರೋನ ಸೋಂಕು ಪತ್ತೆಯಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಅಧಿಕಾರಿ ಡಾ.ವೆಂಕಟೇಶ್, ಶಂಕಿತರ ಸ್ಯಾಂಪಲ್ ಅನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ವರದಿ ಇನ್ನೂ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News