ಜಾಫರ್ ಅವರ ಸಾರ್ವಕಾಲಿಕ ಐಪಿಎಲ್ ತಂಡದಲ್ಲಿ ಧೋನಿ ನಾಯಕ

Update: 2020-03-30 08:41 GMT

ಹೊಸದಿಲ್ಲಿ, ಮಾ.29: ಭಾರತದ ಮಾಜಿ ಬ್ಯಾಟ್ಸ್ ಮನ್ ವಸೀಂ ಜಾಫರ್ ಸಾರ್ವಕಾಲಿಕ ಐಪಿಎಲ್ ತಂಡವನ್ನು ರವಿವಾರ ಆಯ್ಕೆ ಮಾಡಿದ್ದು, ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಎಂ.ಎಸ್. ಧೋನಿ ರನ್ನು ತಂಡದ ನಾಯಕನಾಗಿ ಆಯ್ಕೆ ಮಾಡಿದ್ದಾರೆ.

 ಜಾಫರ್ ಅವರ ತಂಡದಲ್ಲಿ ಓಪನರ್ ರೋಹಿತ್ ಶರ್ಮಾ, ಹಾಲಿ ಭಾರತದ ನಾಯಕ ವಿರಾಟ್ ಕೊಹ್ಲಿ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಸ್ಪಿನ್ನರ್ ಆರ್.ಅಶ್ವಿನ್ ಹಾಗೂ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಅವರಿದ್ದಾರೆ. ವಿದೇಶಿ ಆಟಗಾರರ ಪೈಕಿ ವಿಂಡೀಸ್‌ನ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಲ್, ಆಲ್‌ರೌಂಡರ್ ಆ್ಯಂಡ್ರೆ ರಸ್ಸೆಲ್, ಅಫ್ಘಾನಿಸ್ತಾನದ ಸ್ಪಿನ್ನರ್ ರಶೀದ್ ಖಾನ್ ಹಾಗೂ ಶ್ರೀಲಂಕಾದ ಹಿರಿಯ ವೇಗದ ಬೌಲರ್ ಲಸಿತ್ ಮಾಲಿಂಗ ಅವರಿದ್ದಾರೆ. ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜ 12ನೇ ಆಟಗಾರನಾಗಿ ಆಯ್ಕೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News