ಸಿಇಟಿ ಪರೀಕ್ಷೆ ಮುಂದೂಡಿಕೆ: ಡಿಸಿಎಂ.ಅಶ್ವತ್ಥ ನಾರಾಯಣ

Update: 2020-03-30 15:26 GMT

ಬೆಳಗಾವಿ, ಮಾ.30: ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಎ.22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು(ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎಸ್.ಅಶ್ವತ್ಥ ನಾರಾಯಣ ಸೋಮವಾರ ತಿಳಿಸಿದ್ದಾರೆ.

ಕೋವಿಡ್-19 ಕಾರಣಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಗಳು ಇನ್ನೂ ಪೂರ್ಣವಾಗಿಲ್ಲ. ಅಲ್ಲದೆ, ಸಹಜ ಸ್ಥಿತಿಯೂ ಇಲ್ಲ. ಹೀಗಾಗಿ, ಸಿಇಟಿ ಮುಂದೂಡಲಾಗಿದೆ. ಎಪ್ರಿಲ್ ಮೂರನೆ ವಾರದಲ್ಲಿ ಸಿಇಟಿ ಪರೀಕ್ಷೆಯ ದಿನಾಂಕವನ್ನು ತಿಳಿಸಲಾಗುವುದು ಎಂದು ಹೇಳಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳ ಜತೆ ಮಾತುಕತೆ ನಡೆಸಿದ ನಂತರ ಅವರು ಈ ತೀರ್ಮಾನವನ್ನು ಪ್ರಕಟಿಸಿದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News