ಕಾಪು ತಾಲ್ಲೂಕಿನಲ್ಲಿ ತೆರೆದ ನಿರಾಶ್ರಿತರ ಕೇಂದ್ರ

Update: 2020-03-30 16:04 GMT

ಕಾಪು : ಲಾಕ್‍ಡೌನ್‍ನಿಂದ ಕಂಗಾಲಾಗಿದ್ದ ವಲಸೆ ಕಾರ್ಮಿಕರಿಗೆ ಕಾಪು ತಾಲ್ಲೂಕಿನ ಮೂರು ಕಡೆಗಳಲ್ಲಿ ನಿರಾಶ್ರಿತರ ಕೇಂದ್ರವನ್ನು ತೆರೆಯಲಾಗಿದೆ.

ಕಟಪಾಡಿಯ ಎಸ್‍ವಿಎಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಕಾಪುವಿನ ಡಿ. ದೇವರಾಜ್ ಅರಸ್ ಹಿಂದುಳಿದ ರ್ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಪಡುಬಿದ್ರಿಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಎಲ್ಲಾ ಕೇಂದ್ರಗಳಲ್ಲೂ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಬೆಳಗ್ಗಿನ ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ವ್ಯವಸ್ಥೆಯ ಸದುಪಯೋಗಪಡಿಸಿಕೊಳ್ಳುವವರು ಮೊದಲು ನೊಂದಾಯಿಸಿಕೊಳ್ಳಬೇಕಾಗುತ್ತದೆ. ಲಾಕ್‍ಡೌನ್ ಆಗುವವರೆಗೆ ಅವರು ಅಲ್ಲೇ ತಂಗಬೇಕು. ಆದರೆ ಸಂಜೆಯವರೆಗೂ ಈ ಮೂರು ಕೇಂದ್ರಗಳಲ್ಲೂ ಒಬ್ಬರೂ ನೊಂದಾಯಿಸಿಕೊಂಡಿಲ್ಲ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News