ಮಂಗಳೂರು : 50ಕ್ಕೂ ಅಧಿಕ ವಾಹನಗಳು ಪೊಲೀಸ್ ವಶಕ್ಕೆ

Update: 2020-03-30 16:28 GMT

ಮಂಗಳೂರು : ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅನವಶ್ಯಕವಾಗಿ ರಸ್ತೆಗಿಳಿದ ಸುಮಾರು 50ಕ್ಕೂ ಅಧಿಕ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರಣವಿಲ್ಲದೆ ರಸ್ತೆಗಿಳಿಯುವವರ ವಾಹನಗಳನ್ನು ವಶಪಡಿಸಿಕೊಳ್ಳುವುದಾಗಿ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಈಗಾಗಲೇ ಎಚ್ಚರಿಕೆ ನೀಡಿದ್ದರು. ಜಿಲ್ಲೆಯನ್ನು ಮೂರು ದಿನಗಳ ಕಾಲ ಸಂಪೂರ್ಣ ಬಂದ್ ಮಾಡಿ, ಸಾರ್ವಜನಿಕರು ಮನೆ ಬಿಟ್ಟು ಹೊರಬರಬಾರದು ಎಂದು ಸೂಚನೆ ನೀಡಲಾಗಿತ್ತು. ಆದರೂ ಕೆಲವರು ರಸ್ತೆಗೆ ಬಂದಿದ್ದರು. ಕಾರು, ದ್ವಿಚಕ್ರ ಸೇರಿದಂತೆ ಸುಮಾರು 50ಕ್ಕೂ ಅಧಿಕ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕರು ಮನೆಯಲ್ಲೇ ಇರುವ ಮೂಲಕ ಕೊರೋನ ವೈರಸ್‌ನಿಂದ ದೂರವಿರಬೇಕು ಎಂದವರು ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.

ಕ್ರಿಮಿನಲ್ ಮೊಕದ್ದಮೆ

ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹೆಸರಿನಲ್ಲಿ ಸುಳ್ಳು ಮಾಹಿತಿಗಳನ್ನು ವಾಟ್ಸ್ಆ್ಯಪ್ ಗ್ರೂಪ್‌ಗಳಲ್ಲಿ ಹರಿಯಬಿಟ್ಟು ಸಾರ್ವಜನಿಕರುನ್ನು ದಾರಿ ತಪ್ಪಿಸುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಕ್ರಿಮಿನಲ್ ಮೊಕದ್ದಮೆ ಯೊಂದನ್ನು ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಸಾರ್ವಜನಿಕರು ಅಧಿಕೃತ ಮೂಲಗಳಿಂದ ಬರುವ ಮಾಹಿತಿಗಳನ್ನು ನಂಬಬೇಕು ಎಂದು ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಟ್ವಿಟ್ಟರ್‌ನಲ್ಲಿ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News