ಅಕ್ರಮವಾಗಿ ಮದ್ಯ ಮಾರುವ ಬಾರ್ ಗಳ ಪರವಾನಿಗೆ ರದ್ದು: ಅಬಕಾರಿ ಇಲಾಖೆ ಎಚ್ಚರಿಕೆ

Update: 2020-03-30 16:51 GMT

ಬೆಂಗಳೂರು, ಮಾ.30: ಕೊರೋನ ಸೋಂಕಿನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಎ.14ರವರೆಗೆ ರಾಜ್ಯಾದ್ಯಂತ ಕ ಮಾದರಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ವೇಳೆ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಬಾರ್ ಮತ್ತು ರೆಸ್ಟೋರೆಂಟ್‍ಗಳ ಪರವಾನಿಗೆ ರದ್ದು ಪಡಿಸಲಾಗುವುದು ಎಂದು ಅಬಕಾರಿ ಇಲಾಖೆ ಎಚ್ಚರಿಸಿದೆ.

ಕೊರೋನ ಸೋಂಕನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಆ ಪ್ರಕಾರವಾಗಿ ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಎಲ್ಲವನ್ನು ಬಂದ್ ಮಾಡುವಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ಇದನ್ನು ಮದ್ಯದಂಗಡಿಯ ಮಾಲಕರು ಕಡ್ಡಾಯವಾಗಿ ಪಾಲಿಸಬೇಕು.

ಕೆಲವು ಕಡೆಗಳಲ್ಲಿ ಅಕ್ರಮವಾಗಿ ಮದ್ಯಗಳನ್ನು ಮಾರಾಟ ಮಾಡಲಾಗುತ್ತಿದೆ ಎಂಬ ದೂರುಗಳು ಬರುತ್ತಿವೆ. ಈಗಾಗಲೇ ರಾಜ್ಯದ ವಿವಿಧೆಡೆ 5 ಬಾರ್‍ಗಳ ಪರವಾನಿಗೆಯನ್ನು ರದ್ದು ಪಡಿಸಲಾಗಿದೆ. ಹೀಗಾಗಿ ಅಕ್ರಮ ಮದ್ಯಮಾರಾಟದ ಕುರಿತು ಸಾರ್ವಜನಿಕರಿಂದ ಖಚಿತ ಮಾಹಿತಿಯನ್ನು ಪಡೆದುಕೊಂಡು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗುತ್ತದೆ. ಇದಕ್ಕೆ ಬಾರ್ ಮಾಲಕರು ಅವಕಾಶ ಮಾಡಿಕೊಡಬಾರದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News