ನಿಮ್ಹಾನ್ಸ್ ನಿಂದ ಟೋಲ್ ಫ್ರೀ ಸಂಖ್ಯೆ ಆರಂಭ

Update: 2020-03-30 17:01 GMT

ಬೆಂಗಳೂರು, ಮಾ.30: ಕೋವಿಡ್ 19 ವೈರಸ್ ವ್ಯಾಪಕವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಎಲ್ಲರನ್ನೂ ಗೃಹಬಂಧನದಲ್ಲಿ ಇಟ್ಟಿರುವ ಹಿನ್ನೆಲೆಯಲ್ಲಿ ಅನೇಕರಲ್ಲಿ ಮಾನಸಿಕ ಹಾಗೂ ಚಂಚಲ ವರ್ತನೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ.

ಈ ಹಿನ್ನೆಲೆಯಲ್ಲಿ ಮಾನಸಿಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಬೆಂಗಳೂರಿನಲ್ಲಿರುವ ನಿಮ್ಹಾನ್ಸ್ ಮುಂದಾಗಿದೆ. ಅದರಂತೆ ಯಾವುದೇ ಆರೋಗ್ಯಕ್ಕೆ ಸಂಬಂಧಿಸಿದ ಸಂದೇಹಗಳಿದ್ದರೂ ಸಂಸ್ಥೆಯ ಟೋಲ್ ಫ್ರೀ ಸಂಖ್ಯೆ 080-46110007ಯನ್ನು ಸಂಪರ್ಕಿಸುವಂತೆ ಆರೋಗ್ಯ ಸಚಿವಾಲಯ ಸಲಹೆ ನೀಡಿದೆ.

ಇದೇ ವೇಳೆ ವೈದ್ಯಕೀಯ ತುರ್ತು ಪರಿಸ್ಥಿತಿ ನಿರ್ವಹಣೆ, ಪ್ರತ್ಯೇಕಿಸಲ್ಪಟ್ಟ ಹಾಸಿಗೆಗಳು, ನಿಗಾ ಕೇಂದ್ರಗಳು ಸೇರಿದಂತೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸುವ ಬಗ್ಗೆ ಮಾರ್ಗದರ್ಶನ ನೀಡಲು ಹತ್ತು ಗುಂಪುಗಳನ್ನು ರಚಿಸುವುದಾಗಿ ಹೇಳಿದೆ. ಸೋಂಕು ಪರೀಕ್ಷಿಸುವ ಲ್ಯಾಬ್‍ಗಳ ಸಂಖ್ಯೆಯನ್ನೂ ಹೆಚ್ಚಿಸಲಾಗಿದ್ದು, 47 ಖಾಸಗಿ ಲ್ಯಾಬ್‍ಗಳಿಗೆ ಅನುಮತಿ ನೀಡಲಾಗಿದೆ.

ಕರ್ತವ್ಯಕ್ಕೆ ಹಾಜರಾಗಲು ಸೂಚನೆ: ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಯ ಹೊಸದಾಗಿ ನೇಮಿಸಲಾಗಿದ್ದ 450ಕ್ಕೂ ಹೆಚ್ಚಿನ ವೈದ್ಯಕೀಯ ಅಧಿಕಾರಿಗಳಿಗೆ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಸಿಎಪಿಎಫ್ ಆರೋಗ್ಯ ಕೇಂದ್ರಗಳನ್ನು ತೆರೆಯುತ್ತಿರುವ ಹಿನ್ನೆಲೆಯಲ್ಲಿ ಈ ಆದೇಶ ನೀಡಲಾಗಿದೆ. ನಿವೃತ್ತ ವೈದ್ಯರನ್ನೂ ಗುತ್ತಿಗೆ ಆಧಾರದ ಮೇಲೆ ಕರ್ತವ್ಯಕ್ಕೆ ನೇಮಿಸುವ ಕುರಿತು ಚಿಂತನೆ ನಡೆಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News