ಪೊಲೀಸ್ ದೌರ್ಜನ್ಯ ತನಿಖೆಗೆ ಕಾಂಗ್ರೆಸ್ ಆಗ್ರಹ

Update: 2020-03-30 18:00 GMT

ಬೆಂಗಳೂರು, ಮಾ.30: ರಾಜ್ಯದ ಕೆಲವು ಕಡೆ ಅಲ್ಪಸಂಖ್ಯಾತರು ಸೇರಿದಂತೆ ಇನ್ನಿತರರ ಮೇಲೆ ವಿನಾಕಾರಣ ಪೊಲೀಸರು ಲಾಠಿ ಪ್ರಹಾರ ಮಾಡುತ್ತಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯಗಳು ಪ್ರಸಾರವಾಗುತ್ತಿವೆ. ಈ ಸಂಬಂಧ ಸೂಕ್ತ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್ ಆಗ್ರಹಿಸಿದ್ದಾರೆ.

ಸೋಮವಾರ ನಗರದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಾರ ಸಂಜಯ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಭೂಪಸಂದ್ರದಲ್ಲಿ ಯುವಕರು ಹಾಗೂ ಪೊಲೀಸರ ನಡುವೆ ನಡೆದಿರುವ ಹೊಡೆದಾಟದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರಿಸಲಾಗಿದೆ ಎಂದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ತಾಜುದ್ದೀನ್ ಎಂಬ ಯುವಕನ ಮೇಲೆ ಗುಂಡು ಹಾರಿಸಿದ್ದಾರೆ. ತಾಜುದ್ದೀನ್ ಅವರ ಪೋಷಕರ ಮೇಲೆಯೂ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಎಲ್ಲ ವಿಷಯಗಳಲ್ಲಿ ಪೊಲೀಸರು ನಡೆದುಕೊಂಡಿರುವ ರೀತಿಯ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಮನವಿ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎಂ.ನಾರಾಯಣಸ್ವಾಮಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News