ಕೆರೆಮತ್ತಿಹಳ್ಳಿ ಜಿಲ್ಲಾ ಕಾರಾಗೃಹದಿಂದ 21 ವಿಚಾರಣಾಧೀನ ಕೈದಿಗಳ ಬಿಡುಗಡೆ

Update: 2020-03-31 15:56 GMT

ಹಾವೇರಿ, ಮಾ.31: ಸುಪ್ರೀಂಕೋರ್ಟ್ ಆದೇಶದನ್ವಯ ಕೊರೋನ ವೈರಸ್ ಸೋಂಕು ಹರಡದಂತೆ ತಡೆಗಟ್ಟುವ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಕೆರೆಮತ್ತಿಹಳ್ಳಿಯಲ್ಲಿರುವ ಜಿಲ್ಲಾ ಕಾರಾಗೃಹದಿಂದ ಸೋಮವಾರ 21 ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಲಾಯಿತು.  

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಎಸ್.ಎಚ್.ರೇಣುಕಾದೇವಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಮಿತಿಯ ಸಭೆ ಸೋಮವಾರ ನಡೆಯಿತು. ಈ ಸಭೆಯಲ್ಲಿ ಒಂದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಧೀಶರಾದ ಸೈಯದ್ ಕಿಣಿ, ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ವಿದ್ಯಾಶ್ರೀ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ.ದೇವರಾಜು, ಜಿಲ್ಲಾ ಕಾರಾಗೃಹ ಅಧೀಕ್ಷಕ ತಿಮ್ಮಣ್ಣ ಬಿ. ಭಜಂತ್ರಿ ಮುಂತಾದವರು ಪಾಲ್ಗೊಂಡಿದ್ದರು.

ಜಿಲ್ಲಾ ಮಟ್ಟದ ಸಮಿತಿಯ ತೀರ್ಮಾನದಂತೆ ಮೊದಲ ಬಾರಿಗೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, 7 ವರ್ಷದೊಳಗಿನ ಶಿಕ್ಷೆಗೆ ಗುರಿಯಾಗಿರುವ 21 ವಿಚಾರಣಾಧೀನ ಕೈದಿಗಳನ್ನು ಬಿಡುಗಡೆ ಮಾಡಲಾಯಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News