ಲಾಕ್‍ಡೌನ್ ಪರಿಣಾಮ: ಕಲಬುರಗಿ ರೈತ ಆತ್ಮಹತ್ಯೆ
Update: 2020-03-31 21:22 IST
ಕಲಬುರಗಿ, ಮಾ.31: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ತನ್ನ ಹೊಲದಲ್ಲಿ ಬೆಳೆದಿದ್ದ ಕಲ್ಲಂಗಡಿಯನ್ನು ಮಾರಾಟ ಮಾಡಲು ಸಾಧ್ಯವಾಗದ ಕಾರಣ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಳಂದ ತಾಲೂಕು ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಲಾಡ್ ಚಿಂಚೋಳಿ ಗ್ರಾಮದ ಚಂದ್ರಕಾಂತ್ ಬಿರಾದರ್(45) ಆತ್ಮಹತ್ಯೆ ಮಾಡಿಕೊಂಡ ರೈತ. ಅವರು ತನ್ನ ಮೂರು ಎಕರೆ ಹೊಲದಲ್ಲಿ ಕಲ್ಲಂಗಡಿ ಬೆಳೆದಿದ್ದರು. ಆದರೆ, ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‍ಡೌನ್ ಇರುವುದರಿಂದ ತನ್ನ ಬೆಳೆಯನ್ನು ಮಾರಾಟ ಮಾಡಲು ಸಾಧ್ಯವಾಗುವುದಿಲ್ಲವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.