ಉಡುಪಿ : ಮಸೀದಿಗಳಲ್ಲಿ ಎ.14ರವರೆಗೆ ದೈನಂದಿನ ಪ್ರಾರ್ಥನೆಗೆ ನಿರ್ಬಂಧ
Update: 2020-03-31 22:21 IST
ಉಡುಪಿ, ಮಾ.31: ಕೊರೋನ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಮಾ.23ರಿಂದ 31ರವರೆಗೆ ಜಿಲ್ಲೆಯ ಎಲ್ಲಾ ಮಸೀದಿಗಳಲ್ಲಿ ನಡೆಯುವ ದೈನಂದಿನ ಪ್ರಾರ್ಥನೆ (ಶುಕ್ರವಾರದ ಜುಮ್ಮಾ ಪ್ರಾರ್ಥನೆ ಸೇರಿದಂತೆ)ಯನ್ನು ನಿರ್ಬಂಧಿಸಿ ಹೊರಡಿಸಲಾಗಿದ್ದ ಆದೇಶವನ್ನು ಮುಂದಿನ ಎ.14ರವರೆಗೆ ಮುಂದುವರಿಸಲು ನಿರ್ಧರಿಸಲಾಗಿದೆ.
ಸರಕಾರ ರಾಜ್ಯಾದ್ಯಂತ ಲಾಕ್‌ಡೌನ್‌ನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಎ.14ರವರೆಗೆ ಮುಂದುವರಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಆದೇಶದಲ್ಲಿ ತಿಳಿಸಿದ್ದಾರೆ.