ದ.ಕ.ಜಿಲ್ಲೆ: 13 ಜ್ವರದ ಚಿಕಿತ್ಸಾಲಯ ಕಾರ್ಯಾಚರಣೆ

Update: 2020-03-31 17:28 GMT

ಮಂಗಳೂರು : ರಾಷ್ಟ್ರವ್ಯಾಪಿ ಪಸರಿಸುವ ಕೊರೋನ ವೈರಸ್ ನಿಯಂತ್ರಣ ಮತ್ತು ತಡೆಗಟ್ಟುವ ಸಲುವಾಗಿ ದ.ಕ.ಜಿಲ್ಲೆಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಜನ ಸಾಮಾನ್ಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಜ್ವರ ಕ್ಲಿನಿಕ್‌ಗಳನ್ನು ಪ್ರಮುಖ ಆರೋಗ್ಯ ಸಂಸ್ಥೆಗಳಲ್ಲಿ ತೆರೆದಿದೆ.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲಾ ವ್ಯಾಪ್ತಿಯಲ್ಲಿ 13 ಜ್ವರದ ಚಿಕಿತ್ಸಾಲಯಗಳನ್ನು ತೆರೆಯಲಾಗಿದ್ದು ಅವುಗಳ ಪ್ರಯೋಜನವನ್ನು ಸಾರ್ವಜನಿಕರು ಪಡೆಯಬಹುದಾಗಿದೆ.

ಎಲ್ಲಾ ತಾಲೂಕು ಆಸ್ಪತ್ರೆಗಳು, ಜಿಲ್ಲೆಯ 8 ಮೆಡಿಕಲ್ ಕಾಲೇಜುಗಳಾದ ಎ.ಜೆ. ವೈದ್ಯಕೀಯ ಕಾಲೇಜು ಕುಂಟಿಕಾನ ಮಂಗಳೂರು, ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಕಂಕನಾಡಿ ಮಂಗಳೂರು, ಕಸ್ತೂರ್ಬಾ ವೈದ್ಯಕೀಯ ಕಾಲೇಜು ಅತ್ತಾವರ ಮಂಗಳೂರು, ಯೆನೆಪೊಯ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು, ಶ್ರೀನಿವಾಸ ವೈದ್ಯಕೀಯ ಕಾಲೇಜು ಮುಕ್ಕ ಮಂಗಳೂರು, ಕೆ.ಎಸ್.ಹೆಗ್ಡೆ ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು, ಕೆ.ವಿ.ಜಿ. ವೈದ್ಯಕೀಯ ಕಾಲೇಜು ಸುಳ್ಯ, ಕಣಚೂರು ವೈದ್ಯಕೀಯ ಕಾಲೇಜು ದೇರಳಕಟ್ಟೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲೂ ತೆರೆಯಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿಯ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News