ಕೋವಿಡ್ -19: ಸುದ್ದಿ ಪ್ರಸಾರಕ್ಕೆ ಪೋರ್ಟಲ್ ಸ್ಥಾಪನೆಗೆ ಕೇಂದ್ರಕ್ಕೆ 24 ಗಂಟೆಗಳ ಗಡುವು

Update: 2020-03-31 19:02 GMT

ಹೊಸದಿಲ್ಲಿ, ಮಾ.37:ಕೊರೋನ ವೈರಸ್ ಸಾಂಕ್ರಾಮಿಕ ರೋಗದ ಬಗ್ಗೆ ಜನರಿಗೆ ನೈಜ ಮಾಹಿತಿಯನ್ನು ನೀಡಲು 24 ಗಂಟೆಗಳ ಒಳಗಾಗಿ ಪೋರ್ಟಲ್ ಸ್ಥಾಪಿಸಲು ಕೇಂದ್ರ ಸರಕಾರಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶ ನೀಡಿದೆ.

ವಲಸಿಗರ ನೈರ್ಮಲ್ಯಕ್ಕಾಗಿ ನೀರು ಮತ್ತು ರಾಸಾಯನಿಕಗಳನ್ನು ಸಿಂಪಡಿಸುವ ಸಲಹೆಯು ವೈಜ್ಞಾನಿಕವಾಗಿ ಕೆಲಸ ಮಾಡುವುದಿಲ್ಲ ಮತ್ತು ಸರಿಯಾದ ಮಾರ್ಗವಲ್ಲ ಎಂದು ಕೇಂದ್ರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಹೈಕೋರ್ಟ್‌ಗಳು ವಲಸಿಗರ ಸಮಸ್ಯೆಯನ್ನು ತೆಗೆದುಕೊಳ್ಳುವುದನ್ನು ತಡೆಯಲು ನಿರಾಕರಿಸಿದ ಮುಖ್ಯ ನ್ಯಾಯಮೂರ್ತಿ ಎಸ್‌ಎ ಬೊಬ್ಡೆ ಮತ್ತು ಎಲ್ ನಾಗೇಶ್ವರ ರಾವ್ ನೇತೃತ್ವದ ನ್ಯಾಯಪೀಠ, ಹೈಕೋರ್ಟ್ ಈ ಸಮಸ್ಯೆಯನ್ನು ಹೆಚ್ಚು ಸೂಕ್ಷ್ಮವಾಗಿ ಗಮನಿಸಬಹುದು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ಹೊರಡಿಸಿದ ಆದೇಶಗಳ ಬಗ್ಗೆ ಹೈಕೋರ್ಟ್‌ಗಳಿಗೆ ಮಾಹಿತಿ ನೀಡುವಂತೆ ಸರ್ಕಾರಿ ವಕೀಲರಿಗೆ ತಿಳಿಸುವಂತೆ ಅದು ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ವೀಡಿಯೋ ಕಾನ್ಫರೆನ್ಸ್ ಮೂಲಕ ವಲಸೆ ಕುರಿತು ಎರಡು ಪಿಐಎಲ್‌ಗಳನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್ ಕೇರಳದ ಕಾಸರಗೋಡು ಕ್ಷೇತ್ರದ ಸಂಸದ ರಾಜ್‌ಮೋಹನ್ ಉನ್ನಿತಾನ್ ಅವರು ಗಡಿಯಲ್ಲಿ ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ಬಂದ್ ಮಾಡಿರುವ ಕರ್ನಾಟಕ ಸರಕಾರದ ಕ್ರಮವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು.

ಪಶ್ಚಿಮ ಬಂಗಾಳದ ಸಂಸದರೊಬ್ಬರು ಕೋವಿಡ್ -19ಗೆ ಸಂಬಂಧಿಸಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಗಳಿಗೆ ಸಂಬಂಧಿಸಿ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News