ದಿಲ್ಲಿ ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ಕರ್ನಾಟಕದ 300 ಮಂದಿ ಭಾಗಿ: ಆರೋಗ್ಯ ಸಚಿವ ಶ್ರೀರಾಮುಲು

Update: 2020-04-01 05:18 GMT

ಬೆಂಗಳೂರು, ಎ.1: ತಬ್ಲೀಗಿ ಜಮಾಅತ್ ನ ದಿಲ್ಲಿ ಕೇಂದ್ರ ಕಚೇರಿಯಾಗಿರುವ ಮರ್ಕಝ್ ನಿಝಾಮುದ್ದೀನ್ ನಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕರ್ನಾಟಕ ಮೂಲದ 300 ಜನರು ಭಾಗವಹಿಸಿದ ಬಗ್ಗೆ ಮಾಹಿತಿ ಸಿಕ್ಕಿದೆ. ಇದರಲ್ಲಿ 40 ಜನರನ್ನ ಪತ್ತೆ ಹಚ್ಚಿದ್ದು, ಎಲ್ಲರನ್ನೂ Quarantine ಮಾಡಲಾಗುತ್ತಿದೆ. ಇದರಲ್ಲಿ 12 ಜನರ #COVID19 ಪರೀಕ್ಷೆ ವರದಿ Negative ಎಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತ ಮಾಹಿತಿಯನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದು, ಪ್ರಾರ್ಥನೆಯಲ್ಲಿ ಭಾಗವಹಿಸಿದ ಇಂಡೋನೇಶ್ಯ ಹಾಗೂ ಮಲೇಶ್ಯದ  62 ಪ್ರಜೆಗಳು ಕರ್ನಾಟಕಕ್ಕೆ ಬಂದ ಮಾಹಿತಿ‌ ಲಭಿಸಿದೆ. ಈ ಪೈಕಿ 12 ಜನರನ್ನ ಪತ್ತೆ ಹಚ್ಚಿ Quarantine ಮಾಡಲಾಗುತ್ತಿದೆ. ತಮ್ಮ ದೇಶಕ್ಕೆ ಹಿಂದಿರುಗದೆ ಇಲ್ಲೇ ಉಳಿದಿರುವವರನ್ನು  ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆ  ಕಾರ್ಯಾಚರಣೆ ನಡೆಸಿ, ಪತ್ತೆ ಹಚ್ಚಿ Quarantine ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News