ದಿಲ್ಲಿ ನಿಝಾಮುದ್ದೀನ್ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಿಂದ ಯಾರೂ ಭಾಗವಹಿಸಿಲ್ಲ: ಡಿಸಿ ಸ್ಪಷ್ಟನೆ

Update: 2020-04-01 06:57 GMT

ಉಡುಪಿ, ಎ.1: ತಬ್ಲೀಗಿ ಜಮಾಅತ್‌ನ ದಿಲ್ಲಿ ಕೇಂದ್ರ ಕಚೇರಿಯಾಗಿರುವ ಮರ್ಕಝ್ ನಿಝಾಮುದ್ದೀನ್‌ನಲ್ಲಿ ಇತ್ತೀಚೆಗೆ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಿಂದ ಯಾರೂ ಕೂಡ ಭಾಗವಹಿಸಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಟಿವಿ ಮಾಧ್ಯಮಗಳಲ್ಲಿ ದಿಲ್ಲಿ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ 16 ಮಂದಿ ಭಾಗವಹಿಸಿದ್ದಾರೆ ಎಂಬ ಸುದ್ದಿ ಬರುತ್ತಿರುವ ಹಿನ್ನೆಲೆಯಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ, ಟಿವಿ ಮಾಧ್ಯಮದಲ್ಲಿ ಬರುತ್ತಿರುವ ಮಾಹಿತಿ ಸರಿಯಲ್ಲ. ಆದುದರಿಂದ ಈ ಕುರಿತು ಯಾರು ಕೂಡ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News