ಸಿಎಂ ಪರಿಹಾರ ನಿಧಿಗೆ ಒಂದು ವರ್ಷದ ವೇತನ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

Update: 2020-04-01 07:13 GMT

ಬೆಂಗಳೂರು, ಎ.1: ಕೊರೋನ ವೈರಸ್ ಸೋಂಕು ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತನ್ನ ಒಂದು ವರ್ಷದ ವೇತನವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಕುರಿತು ಬುಧವಾರ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಮುಖ್ಯಮಂತ್ರಿ, ರಾಜ್ಯದ ಶಾಸಕರು, ಸಚಿವರು, ಸಂಸದರು, ಅಧಿಕಾರಿಗಳು ತಮ್ಮ ಕೈಲಾದಷ್ಟು ಆರ್ಥಿಕ ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ. ಕೊರೋನ ವೈರಸ್ ವಿರುದ್ಧ ಹೋರಾಟದಲ್ಲಿ ಎಲ್ಲರೂ ಸಹಕರಿಸುವಂತೆ ಮುಖ್ಯಮಂತ್ರಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News