ಕೆಎಂಸಿ ಮಣಿಪಾಲದಲ್ಲಿ ಟೆಲಿಮೆಡಿಸಿನ್ ಸೌಲಭ್ಯ

Update: 2020-04-01 13:18 GMT

ಮಣಿಪಾಲ, ಎ.1: ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆಯು ಎ.2 ಗುರುವಾರ ದಿಂದ ಜಾರಿಗೆ ಬರುವಂತೆ ಈಗಾಗಲೇ ಚಿಕಿತ್ಸೆಯಲ್ಲಿರುವ ಮತ್ತು ತನ್ನ ಹಳೆಯ ರೋಗಿಗಳ ಅನುಕೂಲಕ್ಕಾಗಿ ಟೆಲಿಮೆಡಿಸಿನ್ ಮೂಲಕ ಸಮಾಲೋಚನೆಯನ್ನು ಪರಿಚಯಿಸುತ್ತಿದ್ದೇವೆ ಎಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ಪ್ರಕಟಿಸಿದ್ದಾರೆ.

ಕೊರೋನ ವೈರಸ್ (ಕೋವಿಡ್-19) ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಹಲವು ನಿರ್ಬಂಧಗಳಿರುವುದರಿಂದ, ನಮ್ಮ ಹೆಚ್ಚಿನ ರೋಗಿಗಳು ವೈದ್ಯರೊಂದಿಗೆ ಸಮಯೋಚಿತ ಸಮಾಲೋಚನೆ ಮತ್ತು ಮರು ಸಮಾಲೋಚನೆ ಯಿಂದ ವಂಚಿತರಾಗಿದ್ದಾರೆ. ಇವನ್ನು ಮನಗಂಡು, ನಮ್ಮ ರೋಗಿಗಳಿಗೆ ಸಮಾಲೋಚನೆ ಮತ್ತು ಮರು ಸಮಾಲೋಚನೆಯನ್ನು ಟೆಲಿಮೆಡಿಸಿನ್ ಸೇವೆಗಳ ಮೂಲಕ ಪರಿಚಯಿಸಲು ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿ ನಿರ್ಧರಿಸಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸೇವೆಯಡಿಯಲ್ಲಿ ಜನರು ತಮ್ಮ ಮನೆಯಲ್ಲಿ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ವೈದ್ಯರು ದೂರವಾಣಿ ಮೂಲಕ ಸಮಾಲೋಚನೆ ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಿದ್ದಾರೆ. ಬೆಳಗ್ಗೆ 9:00ರಿಂದ ಸಂಜೆ 4:00 ರವರೆಗೆ ದೂರವಾಣಿ ಕರೆ ಮಾಡುವುದರ ಮೂಲಕ ಎಲ್ಲಾ ವಿಭಾಗಗಳ ವೈದ್ಯರನ್ನು ಸಂಪರ್ಕಿಸಬಹುದು. ಸಂಪರ್ಕಿಸಲು 080 47192235ಗೆ ಕರೆ ಮಾಡಲು ತಿಳಿಸಲಾಗಿದೆ. ಆದಾರೂ ಜ್ವರದ ಚಿಕಿತ್ಸಾಲಯ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಡಾ.ಶೆಟ್ಟಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News