ವಿದ್ಯಾರ್ಥಿ ನಿಲಯ, ವಸತಿ ಗೃಹಗಳಲ್ಲಿರುವರನ್ನು ತೆರವುಗೊಳಿಸಬೇಡಿ: ಜಿಲ್ಲಾಧಿಕಾರಿ ಜಿ.ಎಸ್.ಶಿವಮೂರ್ತಿ

Update: 2020-04-01 17:29 GMT

ಬೆಂಗಳೂರು, ಎ.1: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿದ್ಯಾರ್ಥಿ ನಿಲಯಗಳು, ಉದ್ಯೋಗಸ್ಥ ಮಹಿಳೆಯರ ವಸತಿ ಗೃಹಗಳಲ್ಲಿ ಹಾಗೂ ಪೇಯಿಂಗ್ ಗೆಸ್ಟ್ ವ್ಯವಸ್ಥೆಗಳಲ್ಲಿ ತಂಗಿರುವವರನ್ನು ತೆರವುಗೊಳಿಸದಂತೆ ಹಾಗೂ ಅವರಿಗೆ ಉಪಾಹಾರ, ಊಟವನ್ನು ಹೆಚ್ಚಿನ ಶುಚಿತ್ವದೊಂದಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಎಸ್.ಶಿವಮೂರ್ತಿ ಸೂಚಿಸಿದ್ದಾರೆ.

ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಾ.25 ರಿಂದ 21 ದಿನಗಳ ಕಾಲ ಜಾರಿಯಲ್ಲಿರುವ ಲಾಕ್‍ಡೌನ್ ಸಂಬಂಧ, ಹಲವು ಶಿಕ್ಷಣ ಸಂಸ್ಥೆಗಳು ಮತ್ತು ಹಾಸ್ಟೆಲ್‍ಗಳು ಮುಚ್ಚಿರುವುದರಿಂದ ಅಲ್ಲಿ ವ್ಯಾಸಂಗ ಮಾಡುತ್ತಿದ್ದಂತಹ ವಿದ್ಯಾರ್ಥಿಗಳಿಗೆ ಊಟ ಹಾಗೂ ವಸತಿ ವ್ಯವಸ್ಥೆಯ ಸಮಸ್ಯೆಯಾಗುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಈ ಸೂಚನೆ ನೀಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News