ಇಟಲಿ: ಒಂದು ದಿನದಲ್ಲಿ 837 ಸಾವು

Update: 2020-04-01 17:47 GMT

ರೋಮ್ (ಇಟಲಿ), ಎ. 1: ಇಟಲಿಯಲ್ಲಿ ಒಂದು ದಿನದ ಅವಧಿಯಲ್ಲಿ ಕೊರೋನವೈರಸ್ ಸೋಂಕಿಗೆ 837 ಮಂದಿ ಬಲಿಯಾಗಿದ್ದಾರೆ ಎಂದು ಸಿವಿಲ್ ಪ್ರೊಟೆಕ್ಷನ್ ಏಜನ್ಸಿ ಮಂಗಳವಾರ ತಿಳಿಸಿದೆ. ಇದರೊಂದಿಗೆ ದೇಶದಲ್ಲಿ ಮಾರಕ ಸಾಂಕ್ರಾಮಿಕದಿಂದಾಗಿ ಪ್ರಾಣ ಕಳೆದುಕೊಂಡವರ ಸಂಖ್ಯೆ 12,428ಕ್ಕೆ ಏರಿದೆ.

ಇದೇ ಅವಧಿಯಲ್ಲಿ 4,053 ಮಂದಿ ಹೊಸದಾಗಿ ಸೋಂಕಿಗೆ ಒಳಗಾಗಿದ್ದಾರೆ ಹಾಗೂ ದೇಶದಲ್ಲಿ ಈವರೆಗೆ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,05,792ಕ್ಕೆ ಏರಿದೆ.

ಸ್ಪೇನ್: 864 ಸಾವು

ಸ್ಪೇನ್‌ನಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ ಕೋವಿಡ್-19 ಸಾಂಕ್ರಾಮಿಕ ಕಾಯಿಲೆಯಿಂದಾಗಿ 864 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ, ದೇಶದಲ್ಲಿ ಕೊರೋನವೈರಸ್‌ನಿಂದಾಗಿ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ ಬುಧವಾರ 9,053ನ್ನು ತಲುಪಿದೆ. ಇದೇ ಅವಧಿಯಲ್ಲಿ ದೇಶದಲ್ಲಿನ ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 1,02,136ಕ್ಕೆ ಏರಿದೆ.

ಫ್ರಾನ್ಸ್: 499 ಬಲಿ

ಫ್ರಾನ್ಸ್‌ನಲ್ಲಿ ಮಂಗಳವಾರ 499 ಮಂದಿ ಕೊರೋನವೈರಸ್ ಸಾಂಕ್ರಾಮಿಕ ಕಾಯಿಲೆಗೆ ಬಲಿಯಾಗಿದ್ದಾರೆ. ಇದು ಈವರೆಗೆ ಆ ದೇಶದಲ್ಲಿ ಒಂದು ದಿನದಲ್ಲಿ ವರದಿಯಾದ ಅತ್ಯಧಿಕ ಸಾವಿನ ಸಂಖ್ಯೆಯಾಗಿದೆ.

ಇದರೊಂದಿಗೆ ದೇಶದಲ್ಲಿ ಕೋವಿಡ್-19 ಕಾಯಿಲೆಗೆ ಬಲಿಯಾದವರ ಒಟ್ಟು ಸಂಖ್ಯೆ 3,523ಕ್ಕೆ ಏರಿದೆ. ಫ್ರಾನ್ಸ್‌ನಲ್ಲಿ ಈಗ ಕೊರೋನವೈರಸ್ ಸೋಂಕಿಗೆ ಒಳಗಾಗಿ 22,757 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News