ಇಬ್ಬರು ಕೊರೊನ ಸೋಂಕಿತರ ವಿರುದ್ಧ ಎಫ್‌ಐಆರ್ ದಾಖಲು

Update: 2020-04-01 18:24 GMT

ಪೋರ್ಟ್‌ಬ್ಲೇರ್, ಎ.1: ಕೊರೊನ ಸೋಂಕಿಗೆ ಒಳಗಾದ ಬಳಿಕ ಕ್ವಾರಂಟೈನ್ ಅವಧಿಯಲ್ಲಿ ಅಧಿಕಾರಿಗಳಿಗೆ ತಪ್ಪು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ದಕ್ಷಿಣ ಅಂಡಮಾನ್ ಜಿಲ್ಲೆಯ ಉಪಾಯುಕ್ತರು ಆದೇಶಿಸಿದ್ದಾರೆ.

ಎಫ್ ಅಲಿ ಮತ್ತು ಎಸ್ ರಹ್ಮಾನ್ ಎಂಬ ಇಬ್ಬರು ಕೊರೊನ ವೈರಸ್ ಸೋಂಕಿತರೆಂಬುದು ದೃಢಪಟ್ಟ ಬಳಿಕ ಇವರನ್ನು ಮನೆಯಲ್ಲಿ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಆದರೆ ತಾವು ಭೇಟಿ ನೀಡಿದ್ದ ಪ್ರದೇಶ, ಸಂಪರ್ಕಿಸಿದ್ದ ವ್ಯಕ್ತಿಗಳ ಬಗ್ಗೆ ಅಧಿಕಾರಿಗಳು ಕೇಳಿದ ಪ್ರಶ್ನೆಗೆ ತಪ್ಪು ಮಾಹಿತಿ ನೀಡಿದ್ದಾರೆ. ಅಲ್ಲದೆ ಕ್ವಾರಂಟೈನ್‌ನ ನಿಯಮವನ್ನು ಇವರು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಲಾಗಿದೆ.

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಕೊರೊನ ಸೋಂಕು ದೃಢಪಟ್ಟಿರುವ 10 ವ್ಯಕ್ತಿಗಳಲ್ಲಿ 9 ವ್ಯಕ್ತಿಗಳು ದಿಲ್ಲಿಯಲ್ಲಿ ನಡೆದಿದ್ದ ತಬ್ಲೀಗಿ ಜಮಾಅತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದರು ಎಂದು ಅಂಡಮಾನ್ ಮತ್ತು ನಿಕೋಬಾರ್ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News