ಕೊರೋನ ನಿಯಂತ್ರಣ: ಎಲ್ಲ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ವೀಡಿಯೊ ಸಂವಾದ

Update: 2020-04-02 08:08 GMT

ಬೆಂಗಳೂರು, ಎ.2: ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಕುರಿತು  ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು.

ಕರ್ನಾಟಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂವಾದದಲ್ಲಿ ಪಾಲ್ಗೊಂಡು ಮಾಹಿತಿ ಒದಗಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಸಚಿವ  ಬಿ.ಶ್ರೀರಾಮುಲು, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಹಾಗೂ ವಿವಿಧ ಇಲಾಖೆಗಳ ಮುಖ್ಯಸ್ಥರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News