ಬೈಕಂಪಾಡಿ ಎಪಿಎಂಸಿ ಯಾರ್ಡ್‌ಗೆ ಸೆಂಟ್ರಲ್ ಮಾರ್ಕೆಟ್‌ನ ಹಣ್ಣು-ತರಕಾರಿ ಸಗಟು ವ್ಯಾಪಾರಿಗಳ ಸ್ಥಳಾಂತರ: ಡಿಸಿ

Update: 2020-04-02 11:36 GMT

ಮಂಗಳೂರು, ಎ.2: ಕೊರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತ ಎ.14ರವರೆಗೆ ವಿಧಿಸಿರುವ ಸೆ.144(3)ಕ್ಕೆ ಪೂರಕವಾಗಿ ಹೆಚ್ಚುವರಿ ಕೆಲವು ನಿರ್ಬಂಧವನ್ನು ಹೇರಲಾಗಿದೆ. ಆ ಪೈಕಿ ನಗರದ ಸೆಂಟ್ರಲ್ ಮಾರ್ಕೆಟ್ ನ ಎಲ್ಲಾ ಹಣ್ಣು ಮತ್ತು ತರಕಾರಿ ಸಗಟು ವ್ಯಾಪಾರಿಗಳನ್ನು ಬೈಕಂಪಾಡಿಯ ಎಪಿಎಂಸಿ ಯಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಸದ್ರಿ ಪ್ರದೇಶದಲ್ಲಿ ಚಿಲ್ಲರೆ ವ್ಯಾಪಾರಿಗಳನ್ನು ಹೊರತುಪಡಿಸಿ ಸಾರ್ವಜನಿಕ ಪ್ರವೇಶ ನಿರ್ಬಂಧಿಸಿದೆ.

ಸಾರ್ವಜನಿಕರು ತಮ್ಮ ವ್ಯಾಪ್ತಿಯ ಅಂಗಡಿಗಳಲ್ಲಿ ತರಕಾರಿ-ಹಣ್ಣುಗಳನ್ನು ಖರೀದಿಸಬೇಕು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ಬಂದರಿನಲ್ಲಿ ದಿನಸಿ ವಸ್ತುಗಳ ಸಗಟು ವ್ಯಾಪಾರ ಎಂದಿನಂತೆ ಮುಂದುವರಿಯುತ್ತದೆ. ಸಗಟು ವ್ಯಾಪಾರಗಾರರು ಸಾರ್ವಜನಿಕರಿಗೆ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ಬಂದರಿನಲ್ಲಿ ಬೆಳಗ್ಗೆ 7ರಿಂದ ಮಧ್ಯಾಹ್ನ 12ರವರೆಗೆ ಸಗಟು ವಾಹನಗಳ ಸಾಮಾನುಗಳನ್ನು ಇಳಿಸಲು ಅವಕಾಶವಿದೆ. ಮಧ್ಯಾಹ್ನ 1ರಿಂದ ಸಂಜೆ 7ರವರೆಗೆ ಸಗಟು ಮಾರಾಟಗಾರರು ಚಿಲ್ಲರೆ ವ್ಯಾಪಾರಿಗಳಿಗೆ ಮಾರಾಟ ಮಾಡಲು ಅವಕಾಶವಿದೆ ಎಂದು ತಿಳಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News