ದೆಹಲಿಯಿಂದ ನಗರಕ್ಕೆ ಬಂದವರನ್ನು ಪತ್ತೆ ಹಚ್ಚಿ ಕ್ವಾರಂಟೈನ್‍ನಲ್ಲಿಡಿ: ಅಧಿಕಾರಿಗಳಿಗೆ ಸಚಿವ ಬಸವರಾಜ ಸೂಚನೆ

Update: 2020-04-02 16:40 GMT

ಬೆಂಗಳೂರು, ಎ.2: ದೆಹಲಿಯ ನಿಝಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಕೆಲವರು ಭಾಗವಹಿಸಿದ್ದು ಕೊರೋನ ವೈರಸ್ ಹರಡಲು ಕಾರಣ ಎನ್ನಲಾಗಿದೆ. ಆದ್ದರಿಂದ ಈ ಸಭೆಯಲ್ಲಿ ಭಾಗವಹಿಸಿ ವೈಟ್‍ಫೀಲ್ಡ್ ರೈಲ್ವೆ ನಿಲ್ದಾಣದ ಮೂಲಕ ನಗರಕ್ಕೆ ಆಗಮಿಸಿದವರನ್ನು ಪತ್ತೆ ಹಚ್ಚಿ ಹೋಂ ಕ್ವಾರಂಟೈನಲ್ಲಿ ಇಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಬೈರತಿ ಬಸವರಾಜ ತಿಳಿಸಿದರು.

ಮಹದೇವಪುರ ಬಿಬಿಎಂಪಿ ಕಚೇರಿಯಲ್ಲಿ ಮಹದೇವಪುರ ವಲಯದ ಬಿಬಿಎಂಪಿ ಅಧಿಕಾರಿಗಳು, ಅರೋಗ್ಯ ಅಧಿಕಾರಿಗಳು ಹಾಗೂ ಪೊಲೀಸ್ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕೊರೋನ ಹರಡದಂತೆ ತಡೆಯಲು ಸರಕಾರ ವಿಧಿಸಿರುವ ಹೋಂ ಕ್ವಾರೆಂಟೈನ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಲಾಕ್‍ಡೌನ್‍ನಿಂದ ಸಂಕಷ್ಟಕ್ಕೀಡಾಗಿರುವ ಕೂಲಿ ಕಾರ್ಮಿಕರು, ಬಡವರಿಗೆ ಅಗತ್ಯ ವಸ್ತುಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು. 

ಈ ಸಂದರ್ಭದಲ್ಲಿ ತಹಶಿಲ್ದಾರ್ ತೇಜಸ್ ಕುಮಾರ್, ಜಂಟಿ ಆಯುಕ್ತ ವೆಂಕಟಾಚಲಪತಿ, ಆರೋಗ್ಯ ಅಧಿಕಾರಿ ಚಂದ್ರಶೇಖರ್, ಪಾಲಿಕೆ ಸದಸ್ಯರಾದ ಎಸ್.ಜಿ. ನಾಗರಾಜ್, ಶ್ರೀಕಾಂತ್, ಜಯಪ್ರಕಾಶ್ ಮತ್ತಿತರರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News