ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯನಾಗಿ ಸೇವೆ ಸಲ್ಲಿಸಲು ಸಿದ್ಧ: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

Update: 2020-04-02 17:01 GMT

ಮೈಸೂರು, ಎ.2: ಕೊರೋನ ವೈರಸ್ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಲು ಮುಂದೆ ಬಂದಿದ್ದಾರೆ.

ಈ ಬಗ್ಗೆ ವಿಡಿಯೋದೊಂದಿಗೆ ಟ್ವೀಟ್ ಮಾಡಿರುವ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಕೊರೋನ ವೈರಾಣು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಕ್ಕೆ ವೈದ್ಯರ ಅಗತ್ಯವಿದ್ದರೆ ನಾನು ಕೂಡ ಒಬ್ಬ ವೈದ್ಯನಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಲು ಸಿದ್ಧನಿದ್ದೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News