ವಾಹನ ತೆರಿಗೆ ಪಾವತಿ ಅವಧಿ ಜೂ.1ರವರೆಗೆ ವಿಸ್ತರಣೆ: ಸಾರಿಗೆ ಸಚಿವ ಲಕ್ಷ್ಮಣ ಸವದಿ

Update: 2020-04-02 17:07 GMT

ಬೆಂಗಳೂರು, ಎ.2: ಕೊರೋನ ವೈರಸ್ ಹಿನ್ನೆಲೆಯಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಲಂ 4(1)ರ ನಿಯಮಗಳನ್ನು ಸಡಿಲಗೊಳಿಸಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ, ಕರ್ನಾಟಕ ರಾಜ್ಯದ ಎಲ್ಲ ನೋಂದಾಯಿತ ವಾಹನಗಳಿಗೆ(ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಅನ್ವಯಿಸುವಂತೆ ಎ.15 ರಿಂದ ಮೇ 15ರೊಳಗಾಗಿ ಪಾವತಿಸಬೇಕಾಗಿದ್ದ ಮೋಟಾರು ವಾಹನ ತೆರಿಗೆಯನ್ನು ದಂಡ ರಹಿತವಾಗಿ ಪಾವತಿಸಲು ಜೂ.1ರವರೆಗೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.

ವಾಹನ ಮಾಲಕರು ಇದನ್ನು ಸದುಪಯೋಗಪಡಿಸಿಕೊಂಡು ಲಾಕ್‍ ಡೌನ್ ಅನ್ನು ಯಶಸ್ವಿಗೊಳಿಸುವ ಮೂಲಕ ಕೊರೋನ ಪಿಡುಗನ್ನು ತಡೆಗಟ್ಟುವ ಸರಕಾರದ ಪ್ರಯತ್ನಕ್ಕೆ ಸಹಕರಿಸಬೇಕೆಂದು ಸವದಿ ಅವರು ಮನವಿ ಮಾಡಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News