ಯೂನಿಯನ್ ಬ್ಯಾಂಕ್ ನೊಂದಿಗೆ ವಿಲೀನಗೊಂಡ ಕಾರ್ಪೋರೇಷನ್ ಬ್ಯಾಂಕ್, ಆಂಧ್ರ ಬ್ಯಾಂಕ್‍ಗಳು

Update: 2020-04-02 17:23 GMT

ಬೆಂಗಳೂರು, ಎ.2: ಸರಕಾರಿ ಸೌಮ್ಯದ ಬ್ಯಾಂಕ್‍ಗಳಾದ ಕಾರ್ಪೋರೇಷನ್ ಬ್ಯಾಂಕ್ ಮತ್ತು ಆಂಧ್ರ ಬ್ಯಾಂಕ್‍ಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಜೊತೆಗೆ ವಿಲೀನಗೊಂಡಿದೆ. ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ಗ್ರಾಹಕರು ಈ ಮೂರು ಬ್ಯಾಂಕಿನ ಎಟಿಎಂ ಬಳಸಿ ಹಣ ಡ್ರಾ ಮಾಡಿಕೊಳ್ಳಬಹುದು. ಈ ಮೂರು ಬ್ಯಾಂಕ್‍ಗಳ ಒಟ್ಟು 13,500ಕ್ಕೂ ಹೆಚ್ಚು ಎಟಿಎಂಗಳಿವೆ. ಮೂರು ಬ್ಯಾಂಕ್‍ಗಳು ಸೇರಿ 9500 ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿವೆ.

ಈ ಬಗ್ಗೆ ಮಾಹಿತಿ ನೀಡಿರುವ ಯೂನಿಯನ್ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರಾಜ್ ಕಿರಣ್ ರೈ, ಬ್ಯಾಂಕುಗಳ ವಿಲೀನದಲ್ಲಿ ಹಲವು ತಿಂಗಳಿನಿಂದ ಬ್ಯಾಂಕಿನ ಸಿಬ್ಬಂದಿಗಳು ಶ್ರಮವಹಿಸಿದ್ದಾರೆ. ನಾವು ಗ್ರಾಹಕರಿಗೆ ಈ ಮೂಲಕ ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ತಮ ಸೇವೆ ಒದಗಿಸುತ್ತೇವೆ. ನಮ್ಮ ಗ್ರಾಹಕರಿಗೆ ಎಟಿಎಂ, ಡಿಜಿಟಲ್ ಸೇವೆಗಳು ಮತ್ತು ಸಾಲ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News