ಭಾರತದಲ್ಲಿ ಕೊರೋನಕ್ಕೆ ಬಲಿಯಾದವರ ಸಂಖ್ಯೆ 56ಕ್ಕೇರಿಕೆ: ಆರೋಗ್ಯ ಸಚಿವಾಲಯ

Update: 2020-04-03 06:37 GMT

  ಹೊಸದಿಲ್ಲಿ,ಎ.3: ದೇಶದಲ್ಲಿ ನೊವೆಲ್ ಕೊರೋನ ವೈರಸ್ ಸೋಂಕಿಗೆ 56 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮೂವರು ಸಾವನ್ನಪ್ಪಿದ್ದು, 336 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ ತಿಳಿಸಿದೆ.

ದೇಶಾದ್ಯಂತ ಕೊರೋನ ವೈರಸ್ ಸೋಂಕು ದೃಢಪಟ್ಟವರ ಸಂಖ್ಯೆ ಇದೀಗ 2,301ಕ್ಕೇರಿದ್ದು, ಒಟ್ಟು 157 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ವಿಶ್ವದಾದ್ಯಂತ ಒಂದು ಮಿಲಿಯನ್‌ಗೂ ಅಧಿಕ ಮಂದಿ ವೈರಸ್ ಸೋಂಕಿಗೆ ಒಳಗಾಗಿದ್ದು, 53,000ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News