×
Ad

ಲಾಕ್‍ಡೌನ್ ಉಲ್ಲಂಘಿಸಿದರೆ 2 ವರ್ಷ ಜೈಲು: ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಕೆ

Update: 2020-04-03 20:14 IST

ಬೆಂಗಳೂರು, ಎ.3: ಕೊರೋನ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಾರಿಗೊಳಿಸಿರುವ ಲಾಕ್ ಡೌನ್ ಆದೇಶ ಉಲ್ಲಂಘಿಸಿ, ಸಂಚಾರ ಮಾಡಿದರೆ, ನೈಸರ್ಗಿಕ ವಿಕೋಪ ಕಾಯ್ದೆಯಡಿ ಬಂಧನ ಮಾಡಲಾಗುವುದು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಹೇಳಿದ್ದಾರೆ.

ಶುಕ್ರವಾರ ಈ ಕುರಿತು ಟ್ವಿಟ್ ಮಾಡಿರುವ ಅವರು, ದಿನೇ ದಿನೇ ಸೋಂಕಿತ ಸಂಖ್ಯೆ ಹೆಚ್ಚಳವಾಗುತ್ತಿದ್ದರೂ, ಹಲವು ಮಂದಿ ನಿರ್ಲಕ್ಷ್ಯ ವಹಿಸಿ ಸಂಚಾರ ಮಾಡುತ್ತಿದ್ದಾರೆ. ಇದಕ್ಕೆ ಸಾಲದೆಂಬಂತೆ ಪೊಲೀಸರ ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದಿರುವುದು ಖಂಡನೀಯ ಎಂದು ತಿಳಿಸಿದ್ದಾರೆ.

ಸೋಂಕು ಹರಡದಂತೆ ಅನಗತ್ಯವಾಗಿ ಯಾರೂ ಸಹ ಮನೆಯಿಂದ ಹೊರಬರದಂತೆ ನಿಯಂತ್ರಿಸಲು ನೈಸರ್ಗಿಕ ವಿಕೋಪ ಕಾಯ್ದೆಯಡಿ ಐಪಿಸಿ 188ರ ಅನ್ವಯ ಬಂಧಿಸಲಾಗುವುದು. ಒಂದು ವೇಳೆ ತಪ್ಪು ಸಾಬೀತಾದರೆ 2 ವರ್ಷಗಳ ಕಾಲ ಜೈಲು ಶಿಕ್ಷೆ ಹಾಗೂ ದಂಡವಿಧಿಸಲು ಅವಕಾಶವಿದೆ. ಹೀಗಾಗಿ, ಸುಖಾಸುಮ್ಮನೆ ಹೊರಗೆ ಬಂದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News