ಅಕ್ರಮ ಮದ್ಯ ಮಾರಾಟ: ಇಬ್ಬರನ್ನು ಬಂಧಿಸಿದ ಸಿಸಿಬಿ ಪೊಲೀಸರು

Update: 2020-04-03 16:47 GMT

ಬೆಂಗಳೂರು, ಎ.3: ಲಾಕ್​ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟವನ್ನು ಸ್ಥಗಿತಗೊಳಿಸಿರುವುದನ್ನೇ ಬಳಸಿಕೊಂಡು ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಜಯನಗರದ ಆರ್.ಪಿ.ಸಿ ಲೇಔಟ್ ನ ಧನಂಜಯ(29), ಆರ್.ಟಿ ನಗರದ 2ನೇ ಕ್ರಾಸ್ ನ ಸಂಜಯ್(29) ಬಂಧಿತ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರು ಆರ್.ಟಿ ನಗರದ ಮನೆಯೊಂದರಲ್ಲಿ ಮದ್ಯದ ಬಾಟಲಿಗಳನ್ನು ಅಕ್ರಮವಾಗಿ ದಾಸ್ತಾನು ಮಾಡಿಕೊಂಡು ಬಾಟಲಿಗೆ ನಾಲ್ಕರಿಂದ ಐದು ಸಾವಿರ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಂಡು ಸಿಸಿಬಿ ಪೊಲೀಸರು ಮನೆ ಮೇಲೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಆರೋಪಿಗಳಿಂದ 1 ಲಕ್ಷ 25 ಸಾವಿರ ಮೌಲ್ಯದ 100 ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News