ಮೈಸೂರು: ಕೊರೋನ ಸಂಬಂಧ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಸಿದ್ದರಾಮಯ್ಯ

Update: 2020-04-03 17:44 GMT
Photo: twitter.com/siddaramaiah

ಮೈಸೂರು,ಎ.3: ಕೊರೋನ ಸಂಬಂಧ ಕೈಗೊಂಡಿರುವ ಅಗತ್ಯ ಕ್ರಮಗಳ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಮೈಸೂರು ಜಿಲ್ಲೆಯಲ್ಲಿ ಕೊರೋನ ಸೋಂಕಿತರು ಹೆಚ್ಚಾದ ಹಿನ್ನೆಲೆಯಲ್ಲಿ ಶುಕ್ರವಾರ ಮೈಸೂರಿಗೆ ಆಗಮಿಸಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಕೊರೋನ ಸಂಬಂಧ ಕೈಗೊಂಡಿರುವ ಅಗತ್ಯ ಕ್ರಮಗಳು ಮತ್ತು ತಡೆಗಟ್ಟಲು ಯಾವ ಯಾವ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ ಎಂದು ಪರೀಶಿಲಿಸಿದರು.

ಕೊರೋನ ಸೋಂಕಿಗೆ ಪ್ರಮುಖ ಕಾರಣವಾದ ಜ್ಯುಬಿಲೆಂಟ್ ಕಾರ್ಖಾನೆ, ಕಾರ್ಮಿಕರ ಪರಿಸ್ಥಿತಿ, ರೈತರಿಗೆ ಉಂಟಾಗಿರುವ ಸಮಸ್ಯೆ, ಕರ್ನಾಟಕ, ಕೇರಳ ಗಡಿ ವಿಚಾರದ ಬಗ್ಗೆಯೂ ಸಿದ್ದರಾಮಯ್ಯ ಅಧಿಕಾರಿಗಳ ಜೊತೆ ಚರ್ಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಅಭಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಕುಮಾರ್ ಮಿಶ್ರ, ಹೆಚ್ಚುವರಿ ಡಿಸಿ ಪೂರ್ಣಿಮಾ, ಆಹಾರ ಮತ್ತು  ನಾಗರೀಕ ಸರಬರಾಜು ಪೂರೈಕೆ ಇಲಾಖೆ ಜಂಟಿ ನಿರ್ದೇಶಕ ಪಿ.ಶಿವಣ್ಣ, ಹೆಚ್ಚುವರಿ ಎಸ್ಪಿ ಸ್ನೇಹಾ, ವಿಧಾನಪರಿಷತ್ ಸದಸ್ಯ ಆರ್.ಧರ್ಮಸೇನಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News