ಪಡಿತರ ಪಡೆಯಲು ಒಟಿಪಿ ಕಡ್ಡಾಯವಲ್ಲ: ಸಚಿವ ಗೋಪಾಲಯ್ಯ

Update: 2020-04-04 16:31 GMT

ಬೆಂಗಳೂರು, ಎ.4: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ ಎಪ್ರಿಲ್ ಹಾಗೂ ಮೇ ತಿಂಗಳ ಪಡಿತರವನ್ನು ಒಟಿಪಿಯೊಂದಿಗೆ ಪಡೆಯಲು ಸಾಧ್ಯವಾಗದ ಕಡೆಗಳಲ್ಲಿ ಒಟಿಪಿ ಇಲ್ಲದೆ ಆಹಾರ ಧಾನ್ಯಗಳನ್ನು ನೀಡುವಂತೆ ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.

ರಾಜ್ಯದ ಜನರು ಆಹಾರ ಇಲಾಖೆಯಿಂದ ಕೊಡಮಾಡುವ ಪಡಿತರವನ್ನು ಪಡೆಯಲು ಯಾವುದೇ ಸಮಸ್ಯೆಯಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಜಿಲ್ಲಾಧಿಕಾರಿಗಳ ಜವಾಬ್ದಾರಿ. ಕೆಲವು ತಾಂತ್ರಿಕ ಸಮಸ್ಯೆಗಳಿದ್ದರೆ, ಅವುಗಳನ್ನು ಲೆಕ್ಕಿಸದೆ ಪಡಿತರವನ್ನು ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆಯಲ್ಲಿ ಎಲ್ಲ ಕಾರ್ಯಗಳು ಸುಸೂತ್ರವಾಗಿ ಆಗಬೇಕೆಂದು ಪತ್ರಿಕಾ ಪ್ರಕಟನೆಯ ಮೂಲಕ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News