ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತ್ಯು

Update: 2020-04-04 17:25 GMT

ಬೆಳಗಾವಿ, ಎ.4: ಕೃಷಿ ಹೊಂಡಕ್ಕೆ ಬಿದ್ದು ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಮಕ್ಕಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಇಂದು ಮದ್ಯಾಹ್ನ ಬೆಳಗಾವಿ ಜಿಲ್ಲೆಯ ಗೋಕಾಕ್​ ತಾಲೂಕಿನ ಅಜ್ಜನಕಟ್ಟಿ ಗ್ರಾಮದಲ್ಲಿ ನಡೆದಿದೆ.

ಮೃತ ಮಕ್ಕಳನ್ನು ಭಾಗವ್ವ (6) ತಾಯಮ್ಮ (5) ಮಾಳಪ್ಪ (4) ಹಾಗೂ ರಾಜಶ್ರೀ (2) ಎಂದು ಗುರುತಿಸಲಾಗಿದೆ. 

ತೋಟದ ಮನೆಯ ಸಮೀಪ ಆಟವಾಡುತ್ತಿದ್ದ ವೇಳೆ ತಮ್ಮ ಕೈಯಲ್ಲಿದ್ದ ಮೊಬೈಲ್ ಕೃಷಿ ಹೊಂಡಕ್ಕೆ ಬಿದ್ದಿದ್ದು, ಈ ವೇಳೆ ಮೊಬೈಲ್ ತೆಗೆಯಲು ಹೊಂಡಕ್ಕೆ ಇಳಿದ ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಗೋಕಾಕ್ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News