ರಾಜಸ್ತಾನ: ಸಿಎಎ ವಿರೋಧಿ ಪ್ರತಿಭಟನಾಕಾರರ ಜಾಮೀನು ಅರ್ಜಿ ತಿರಸ್ಕೃತ

Update: 2020-04-04 18:08 GMT

ಜೈಪುರ, ಎ.4: ಕೊರೋನ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಜೈಲಿನಲ್ಲಿ ಜನದಟ್ಟಣೆ ನಿವಾರಿಸಲು ಖೈದಿಗಳನ್ನು ಪರೋಲ್ ಮೇಲೆ ಮತ್ತು ವಿಚಾರಣಾಧೀನ ಕೈದಿಗಳನ್ನು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಬೇಕೆಂಬ ಸುಪ್ರೀಂಕೋರ್ಟ್‌ನ ಆದೇಶದ ಹೊರತಾಗಿಯೂ ರಾಜಸ್ತಾನ ಹೈಕೋರ್ಟ್ ಪೌರತ್ವ ವಿರೋಧಿ ಪ್ರತಿಭಟನಾಕಾರರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಕಳೆದ ತಿಂಗಳು ಬಂಧಿಸಲ್ಪಟ್ಟ ಈ ಪ್ರತಿಭಟನಾಕಾರರನ್ನು ಬರಾನ್ ಜಿಲ್ಲೆಯ ಜೈಲಿನಲ್ಲಿ ಇಡಲಾಗಿದೆ. ಆರೋಪಿಗಳನ್ನು ಬಿಡುಗಡೆಗೊಳಿಸುವ ವಿಷಯ ‘ಅತ್ಯಂತ ತುರ್ತು ವಿಷಯ’ದ ವರ್ಗದಲ್ಲಿ ಬರುವುದಿಲ್ಲ. ಆದ್ದರಿಂದ ಜಾಮೀನು ಅರ್ಜಿಯ ವಿಚಾರಣೆ ತುರ್ತು ನಡೆಯುವ ಅತ್ಯವಿಲ್ಲ ಎಂದು ಹೈಕೋರ್ಟ್ ತಿಳಿಸಿದೆ.

 ರಾಜಸ್ತಾನದ ಜೈಲಿನಲ್ಲಿ ಹೆಚ್ಚಿನ ಜನಸಂದಣಿ ಇಲ್ಲ ಎಂದು ಬಂಧೀಖಾನೆ ವಿಭಾಗದ ಪ್ರಧಾನ ನಿರ್ದೇಶಕರು ಸಲ್ಲಿಸಿದ್ದ ವರದಿಯನ್ನು ಉಲ್ಲೇಖಿಸಿದ ಹೈಕೋರ್ಟ್, ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News