ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ಲಾಕ್‍ಡೌನ್‍ನಿಂದ ವಿನಾಯಿತಿ

Update: 2020-04-05 11:31 GMT

ಬೆಂಗಳೂರು, ಎ.5: ಲಾಕ್‍ಡೌನ್ ನಡೆವೆಯೂ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ರಾಜ್ಯದಲ್ಲಿ ಕೃಷಿ ಯಂತ್ರೋಪಕರಣಗಳ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ.

ಗೃಹ ಸಚಿವಾಲಯದ ಮಾರ್ಗಸೂಚಿ ಪ್ರಕಾರ ರಾಜ್ಯದಲ್ಲಿ ಕೊರೋನ ಲಾಕ್‍ಡೌನ್‍ನಿಂದ ಬೀಗ ಹಾಕಿರುವ ಕೃಷಿ ಯಂತ್ರೋಪಕರಣಗಳನ್ನು, ಬಿಡಿ ಭಾಗಗಳನ್ನು ಮಾರಾಟ ಮಾಡುವ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ. ಇದರಿಂದ ರೈತರಿಗೆ ಸಾಕಷ್ಟು ಅನುಕೂಲವಾಗಲಿದೆ.

ಕೃಷಿ ಯಂತ್ರೋಪಕರಣಗಳ ಅಂಗಡಿಗಳು, ಅದರ ಬಿಡಿ ಭಾಗಗಳು ಮತ್ತು ರಿಪೇರಿ ಮಾಡುವವರು ತಕ್ಷಣದಿಂದ ಗೃಹ ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ ಸಾಮಾಜಿಕ ಅಂತರದೊಂದಿಗೆ ಅಂಗಡಿಗಳನ್ನು ತೆರೆದು ಕಾರ್ಯನಿರ್ವಹಿಸಲು ಸೂಚಿಸಲಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News