ಸಿದ್ಧಗಂಗಾ ಮಠದಿಂದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ದೇಣಿಗೆ

Update: 2020-04-05 11:44 GMT

ತುಮಕೂರು,ಎ. 5: ಕೊರೋನ ವೈರಸ್ ನಿಯಂತ್ರಣಕ್ಕಾಗಿ ಸಿದ್ಧಗಂಗಾ ಮಠ ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆ ವತಿಯಿಂದ 50 ಲಕ್ಷ ರೂ. ಗಳ ಡಿಡಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಯಿತು.  

ಸಿದ್ಧಗಂಗಾ ಮಠದಲ್ಲಿಂದು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳು ಸಿದ್ಧಗಂಗಾ ಮಠದಿಂದ 25 ಲಕ್ಷ ರೂ. ಹಾಗೂ ಸಿದ್ಧಗಂಗಾ ವಿದ್ಯಾಸಂಸ್ಥೆಯಿಂದ 25 ಲಕ್ಷ ರೂ.ಗಳು ಒಟ್ಟು 50 ಲಕ್ಷ ರೂ.ಗಳ ಡಿಡಿಯನ್ನು ಕಾನೂನು, ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅವರ ಮೂಲಕ ಸಿಎಂ ಪರಿಹಾರ ನಿಧಿಗೆ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್, ಸಿದ್ಧಗಂಗಾ ಮಠದ ವಿಶ್ವನಾಥಯ್ಯ, ಟಿ.ಕೆ. ನಂಜುಂಡಪ್ಪ, ಮತ್ತಿತರರು ಹಾಜರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News