ಎ.7ರಿಂದ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ
Update: 2020-04-05 18:53 IST
ಬೆಂಗಳೂರು, ಎ.5: ಎ.7ರ ಮಂಗಳವಾರದಿಂದ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ 22 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಜಾರಿ ಮಾಡಲಾಗಿದ್ದು, ಎ.7 ಮತ್ತು 8ರಂದು ರಾಜ್ಯದ ವಿವಿಧೆಡೆ ವರುಣ ಅಬ್ಬರಿಸಲಿದ್ದಾನೆ. ಬೆಂಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ದಾವಣಗೆರೆ, ಹಾಸನ, ಕೊಡಗು ಮತ್ತು ಮೈಸೂರಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ರಣಬಿಸಿಲಿನ ತಾಪದಿಂದ ಬಸವಳಿದಿದ್ದ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ರವಿವಾರ ಸಂಜೆ ಮಳೆ ಸುರಿದಿದ್ದು, ಗುಡುಗು, ಸಿಡಿಲು, ಗಾಳಿ ಸಹಿತ ಸುರಿದ ಮಳೆ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಮನ್ಸೂಚನೆ ನೀಡಿದೆ.