ಕೆಪಿಎಸ್‌ಸಿ: ಆನ್‍ಲೈನ್ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

Update: 2020-04-05 13:31 GMT

ಬೆಂಗಳೂರು, ಎ.5: ಕರ್ನಾಟಕ ಲೋಕಸೇವಾ ಆಯೋಗವು 2019-20ನೇ ಸಾಲಿನ ವಿವಿಧ ಇಲಾಖೆಗಳಲ್ಲಿನ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ಉಳಿಕೆ ಮೂಲ ವೃಂದದ ಮತ್ತು ಹೈದ್ರಾಬಾದ್‍ ಕರ್ನಾಟಕ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಆನ್‍ಲೈನ್‍ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಆಯೋಗವು ಫೆ.29ರಂದು ಅಧಿಸೂಚನೆ ಹೊರಡಿಸಿತ್ತು. ಎ.9ರವರೆಗೆ ಆನ್‍ಲೈನ್ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತು ಎ.14 ರವರೆಗೆ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಿತ್ತು. ಆದರೆ ಈಗ ಅಪ್ಲಿಕೇಶನ್ ಸ್ವೀಕರಿಸುವ ದಿನಾಂಕ ಮುಂದೂಡಿ ಹೊಸ ದಿನಾಂಕಗಳನ್ನು ಪ್ರಕಟಿಸಿದೆ.

ಪರಿಷ್ಕೃತ ವೇಳಾಪಟ್ಟಿ: ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಎ.30, ಅರ್ಜಿ ಶುಲ್ಕ ಪಾವತಿಸಲು ಕೊನೆ ದಿನಾಂಕ ಮೇ 2, ಕಡ್ಡಾಯ ಕನ್ನಡ ಭಾಷೆ ಪರೀಕ್ಷೆ ದಿನಾಂಕ ಜೂ.6. ಸ್ಪರ್ಧಾತ್ಮಕ ಪರೀಕ್ಷೆ ನಡೆಯುವ ದಿನಾಂಕ ಜೂ.7

ರಾಜ್ಯದಲ್ಲಿ ಕೊರೋನ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರಕಾರವು ಹೊರಡಿಸಿರುವ ವಿವಿಧ ಆದೇಶಗಳನ್ವಯ, ಎಸ್‍ಡಿಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪರಿಷ್ಕೃತ ದಿನಾಂಕ ಪ್ರಕಟಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕೆಪಿಎಸ್‍ಸಿ ಅಧಿಕೃತ ವೆಬ್‍ಸೈಟ್ www.kpsc.kar.nic.in ಗೆ ಭೇಟಿ ನೀಡಿ ಆನ್‍ಲೈನ್ ಅಪ್ಲಿಕೇಶನ್ ಸಲ್ಲಿಸಬೇಕು. ಭಾವಚಿತ್ರ, ಸಹಿ, ವಿದ್ಯಾರ್ಹತೆ ದಾಖಲೆಗಳನ್ನು ಅಪ್‍ಲೋಡ್ ಮಾಡಿ ಅರ್ಜಿ ಪೂರ್ಣಗೊಳಿಸಿದ ನಂತರ ಅರ್ಜಿ ಶುಲ್ಕ ಪಾವತಿಸಬೇಕು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News