ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

Update: 2020-04-05 18:06 GMT

ಮೈಸೂರು, ಎ.5: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಂಜನಗೂಡು ತಾಲೂಕಿನ ರಾಜೂರು ಗ್ರಾಮದಲ್ಲಿ ನಡೆದಿದೆ. ರಮೇಶ್ (54) ಕೊಲೆಯಾದ ವ್ಯಕ್ತಿ ಎನ್ನಲಾಗಿದೆ. 

ರಮೇಶ್ ಹಾಗೂ ಇತರರ ನಡುವೆ ಜಮೀನಿಗೆ ಹೋಗುವ ದಾರಿ ವಿಚಾರವಾಗಿ ಮಾತಿಗೆ ಮಾತು ಬೆಳೆದು, ಆರೋಪಿಗಳು ರಮೇಶ್ ಮೇಲೆ ಕೈಮಾಡಿದ್ದಾರೆ. ಕೆನ್ನೆಗೆ ಹೊಡೆದ ಪರಿಣಾಮ ರಮೇಶ್ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

ಸಣ್ಣ ಕಾರಣಕ್ಕಾಗಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದ್ದು, ಮೃತದೇಹವನ್ನು ಕೆ.ಆರ್.ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಡಿವೈಎಸ್ಪಿ ಪ್ರಭಾಕರರಾವ್ ಶಿಂಧೆ, ವೃತ್ತ ನಿರೀಕ್ಷಕ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News