ಮಧ್ಯಪ್ರದೇಶದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಕೊರೋನ ಸೋಂಕು

Update: 2020-04-05 18:07 GMT

ಭೋಪಾಲ, ಎ.5: ಮಧ್ಯಪ್ರದೇಶದ ಸಾರ್ವಜನಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಎರಡು ದಿನದ ಹಿಂದೆ ಮಧ್ಯಪ್ರದೇಶದ ಆರೋಗ್ಯ ಸೇವಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಇದೀಗ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೂ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಜಾರಿಗೊಳಿಸುವ ಮತ್ತು ಆರೋಗ್ಯ ಸೇವಾ ಸಂಸ್ಥೆಗಳಿಗೆ ಅಗತ್ಯ ಔಷಧ ಹಾಗೂ ಸಾಧನಗಳನ್ನು ದೊರಕಿಸುವ ಕರ್ತವ್ಯ ನಿರ್ವಹಿಸುತ್ತಿದ್ದ ಆರೋಗ್ಯ ಸೇವಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕರು ಎಲ್ಲಿಯೂ ಪ್ರಯಾಣಿಸಿದ ಅಥವಾ ಇತರೊಂದಿಗೆ ಸಂಪರ್ಕದಲ್ಲಿದ್ದ ವಿವರ ವಿಲ್ಲ ಎಂದು ಮೂಲಗಳು ತಿಳಿಸಿವೆ.

 ಇದೀಗ ಬಹುತೇಕ ಸರಕಾರಿ ಅಧಿಕಾರಿಗಳು ವರ್ಕ್‌ಫ್ರಂ ಹೋಂ ಪ್ರಕ್ರಿಯೆಗೆ ಒಲವು ತೋರುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಭೋಪಾಲದ ಕಾರೊಂಡ್ ಮಂಡಿಯಲ್ಲಿರುವ ಅತ್ಯಂತ ದೊಡ್ಡ ಸಗಟು (ಹೋಲ್‌ಸೇಲ್) ವ್ಯಾಪಾರಿಗೂ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯ ಎಲ್ಲಾ ವ್ಯಾಪಾರಿಗಳನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News