ಮೂಡುಬಿದಿರೆ: ಬಿಜೆಪಿ ಸಂಸ್ಥಾಪನಾ ದಿನಾಚರಣೆ
Update: 2020-04-06 13:15 IST
ಮಂಗಳೂರು, ಎ.6: ಮೂಡುಬಿದಿರೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಸ್ಥಾಪನಾ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಪಕ್ಷದ ಧ್ವಜಾರೋಹಣ ಮಾಡಿದರು.
ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ ಎಂ., ಶಾಸಕ ಉಮಾನಾಥ್ ಕೋಟ್ಯಾನ್, ಮಂಡಲ ಅಧ್ಯಕ್ಷ ಸುನೀಲ್ ಆಳ್ವ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸುಕೇಶ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲ್, ಕೇಶವ ಹಾಗೂ ಪ್ರಮುಖರು ಉಪಸ್ಥಿತರಿದ್ದರು