×
Ad

ಉಡುಪಿ: ಮಸೀದಿಗಳಲ್ಲಿ ಶಬೇ ಬರಾಅತ್ ಪ್ರಾರ್ಥನೆಗೆ ನಿರ್ಬಂಧ

Update: 2020-04-06 17:34 IST

ಉಡುಪಿ, ಎ.6: ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲ ಮಸೀದಿ, ದರ್ಗಾ ಮತ್ತು ಖಬರ್‌ಸ್ಥಾನಗಳಲ್ಲಿ ಆಚರಿಸಲಾಗುವ ಶಬೇ ಬರಾಅತ್ ಪ್ರಾರ್ಥನೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ಸಂಬಂಧ ಮಸೀದಿ, ದರ್ಗಾ, ಖಬರ್‌ಸ್ಥಾನಗಳಿಗೆ ಸಾರ್ವಜನಿಕರು ಭೇಟಿ ನೀಡುವುದನ್ನು ಕೂಡ ನಿಷೇಧಿಸಲಾಗಿದೆ.

ರಾಜ್ಯ ವಕ್ಫ್ ಮಂಡಳಿ ಹಾಗೂ ಉಡುಪಿ ಜಿಲ್ಲಾಡಳಿತ ಈಗಾಗಲೇ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ (ಶುಕ್ರವಾರದ ಜುಮಾ ನಮಾಝ್ ಸೇರಿದಂತೆ) ಕೊರೋನ ವೈರಸ್ ಖಾಯಿಲೆ ಹರಡದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಬಂಧಿಸಿ, ಮುಂಜಾಗೃತ ಕ್ರಮಗಳನ್ನು ಕೈಗೊಂಡಿದೆ.

ಅದೇ ರೀತಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎ.6ರಂದು ಹೊರಡಿಸಿರುವ ಆದೇಶದಲ್ಲಿ ಶಬೇ ಬರಾಅತ್ ಪ್ರಾರ್ಥನೆಯನ್ನು ನಿಷೇಧಿಸಲಾಗಿದೆ. ಆದುದರಿಂದ ಮಸೀದಿಗಳ ಆಡಳಿತ ಸಮಿತಿಗಳು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಹಾಗೂ ಆದೇಶಗಳು ಉಲ್ಲಂಘನೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಡುಪಿ ಜಿಲ್ಲಾ ವಕ್ಫ್ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News