ದ.ಕ.ಜಿಲ್ಲೆ: ಸೋಮವಾರ 21 ಮಂದಿಯ ಕೊರೋನ ವೈರಸ್ ವರದಿ ನೆಗೆಟಿವ್

Update: 2020-04-06 16:35 GMT

ಮಂಗಳೂರು, ಎ.6: ಕೊರೋನ ವೈರಸ್ ತಡೆಯುವ ನಿಟ್ಟಿನಲ್ಲಿ ದ.ಕ.ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ವೈದ್ಯಕೀಯ ತಂಡವು ಕಟ್ಟುನಿಟ್ಟಿನ ಆರೋಗ್ಯ ತಪಾಸಣೆ ಮುಂದುವರಿಸಿದೆ. ಅದರಂತೆ ಸೋಮವಾರ ಸ್ವೀಕರಿಸಿದ 21 ಮಂದಿಯ ವರದಿಯು ನೆಗೆಟಿವ್ ಆಗಿದೆ. ಇದು ದ.ಕ. ಜಿಲ್ಲೆಯ ಮಟ್ಟಿಗೆ ಸಮಾಧಾನಕರ ಸಂಗತಿಯಾಗಿದೆ.

ಸೋಮವಾರ 21 ಮಂದಿಯ ಸ್ಕ್ರೀನಿಂಗ್ ಮಾಡಲಾಗಿದೆ. ಇದರೊಂದಿಗೆ ಈವರೆಗೆ 38,652 ಮಂದಿಯ ಸ್ಕ್ರೀನಿಂಗ್ ಮಾಡಿದಂತಾಗಿದೆ. ಈ ಮಧ್ಯೆ ಸೋಮವಾರ ಮತ್ತೆ 10 ಮಂದಿಯ ಗಂಟಲಿನ ದ್ರವವನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ರವಾನೆ ಮಾಡಲಾಗಿದೆ. ಸೋಮವಾರದವರೆಗೆ 4,237 ಮಂದಿ ಹೋಂ ಕ್ವಾರಂಟೈನ್‌ನಲ್ಲಿದ್ದಾರೆ. ಇಎಸ್‌ಐ ಆಸ್ಪತ್ರೆಯಲ್ಲಿ 10 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ 28 ದಿನದ ನಿಗಾ ಅವಧಿಯನ್ನು 1709 ಮಂದಿ ಪೂರೈಸಿದ್ದಾರೆ.

ಈವರೆಗೆ 341 ಮಂದಿಯ ಗಂಟಲಿನ ದ್ರವ ಪರೀಕ್ಷೆಗಾಗಿ ಕಳುಹಿಸಲಾಗಿತ್ತು. ಆ ಪೈಕಿ 331 ಮಂದಿಯ ವರದಿಯನ್ನು ಸ್ವೀಕರಿಸಲಾಗಿದ್ದು, ಇನ್ನೂ 10 ಮಂದಿಯ ವರದಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News