ಬಂಟ್ವಾಳ: ರಮಾನಾಥ ರೈ ನೇತೃತ್ವದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ

Update: 2020-04-06 17:00 GMT

ಬಂಟ್ವಾಳ, ಎ.5: ಕೊರೋನ ವೈರಸ್ ಹಬ್ಬುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ನಿಂದಾಗಿ ಸಂಕಷ್ಟದಲ್ಲಿರುವ ಬಡವರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಅವರ ನೇತೃತ್ವದಲ್ಲಿ ದಿನಸಿ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.

ರಮಾನಾಥ ರೈ ಅವರ ವೈಯಕ್ತಿಕ ಧನ ಸಹಾಯ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಹಕಾರದಿಂದ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ 44 ಗ್ರಾಮ ಪಂಚಾಯತ್ ಮತ್ತು ಪುರಸಭೆಯ 27 ವಾರ್ಡ್ ಅರ್ಹ ಬಡವರಿಗೆ ಕಿಟ್ ಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News