ಕಾಪು ತಾಲ್ಲೂಕಿನಲ್ಲಿ ಉತ್ತಮ ಮಳೆ

Update: 2020-04-07 14:47 GMT

ಕಾಪು : ಮಂಗಳವಾರ ಸಂಜೆ ಪಡುಬಿದ್ರಿ, ಕಾಪು ತಾಲ್ಲೂಕಿನಾದ್ಯಂತ ಸಿಡಿಲು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಿದೆ. ಕೆಲವಡೆ ಗಾಳಿ, ಸಿಡಿಲು ಸಹಿತ ಮಳೆಯಾಗಿದೆ. ಹಲವು ಕಡೆಗಳಲ್ಲಿ ಚರಂಡಿಯ ವ್ಯವಸ್ಥೆ ಸರಿಪಡಿಸದೆ ಇರುವುದರಿಂದ ರಸ್ತೆಯಲ್ಲೇ ನೀರು ಹರಿದು ಹೋಗುವಂತಾಯಿತು.

ಪಡುಬಿದ್ರಿ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಸಮರ್ಪಕ ಕಾಮಗಾರಿಯಿಂದ ಸರ್ವೀಸ್ ರಸ್ತೆಯಲ್ಲಿ ಮಳೆ ನೀರು ಹರಿದುಹೋಗುತಿತ್ತು, ಪಡುಬಿದ್ರಿಯ ಕಲ್ಸಂಕದಲ್ಲಿ ಕಾಮಗಾರಿ ಅಪೂರ್ಣಗೊಂಡಿರುವುದರಿಂದ ಮಳೆ ನೀರು ಹೆದ್ದಾರಿಯಲ್ಲಿಯೇ ಹೋಗುವಂತಾಯಿತು. ಪಡುಬಿದ್ರಿಯ ಕಾರ್ಕಳ ಸಂಪರ್ಕಿಸುವ  ಸರ್ಕಲ್ ಬಳಿ ಮಳೆ ನೀರು ನಿಂತಿತ್ತು. ಆದರೆ ಲಾಕ್‍ಡೌನ್‍ನಿಂದ ಹೆಚ್ಚಿನ ವಾಹನಗಳು ಹಾಗೂ ಜನರು ಇಲ್ಲದ ಕಾರಣ ಯಾವುದೇ ಸಮಸ್ಯೆಯಾಗಲಿಲ್ಲ.

ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ಕೊರೋನ ವೈರಸ್‍ನಿಂದ ಲಾಕ್‍ಡೌನ್ ಆಗಿರುವುದರಿಂದ ಉಡುಪಿ, ದಕ ಜಿಲ್ಲೆಯ ಗಡಿ ಪ್ರದೇಶದಲ್ಲಿರುವ ತಪಾಸಣಾ ಕೇಂದ್ರದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸರು ತಪಾಸಣೆಯನ್ನು ಮುಂದುವರಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News