ರಾಜ್ಯದ 636 ಕೈದಿಗಳಿಗೆ ಜಾಮೀನು: ಸರಕಾರದಿಂದ ಹೈಕೋರ್ಟ್‍ಗೆ ಮಾಹಿತಿ

Update: 2020-04-07 15:28 GMT

ಬೆಂಗಳೂರು, ಎ.7: ಕೊರೋನ ವೈರಸ್ ಹರಡುವಿಕೆ ತಡೆಗೆ ಮುಂಜಾಗ್ರತ ಕ್ರಮವಾಗಿ ಸುಪ್ರೀಂಕೋರ್ಟ್ ನಿರ್ದೇಶನ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದ ಉನ್ನತಾಧಿಕಾರಿ ಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯದಲ್ಲಿ 636 ಕೈದಿಗಳಿಗೆ ಮಧ್ಯಂತರ ಜಾಮೀನು ನೀಡಲಾಗಿದೆ ಹಾಗೂ 1,379 ಕೈದಿಗಳನ್ನು ಪೆರೋಲ್ ಮೇಲೆ ಬಿಡುಗಡೆ ಮಾಡಲು ಗುರುತಿಸಲಾಗಿದೆ ಎಂದು ಹೈಕೋರ್ಟ್‍ಗೆ ರಾಜ್ಯ ಸರಕಾರ ಮಾಹಿತಿ ನೀಡಿತು.

ಸುಪ್ರೀಂಕೋರ್ಟ್ ನಿರ್ದೇಶನ ಮೇರೆಗೆ ರಾಜ್ಯದ ಕಾರಾಗೃಹಗಳಲ್ಲಿದ್ದ 636 ಕೈದಿಗಳಿಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಪೆರೋಲ್ ಮೇಲೆ ಬಿಡುಗಡೆ ಮಾಡಲು 1,379 ಕೈದಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಈಗಾಗಲೇ 14 ಕೈದಿಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದವರನ್ನೂ ಬಿಡುಗಡೆ  ಮಾಡಲಾಗುವುದು ಎಂದು ಸರಕಾರದ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News