​ವಲಸೆ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

Update: 2020-04-07 16:00 GMT

ಬೆಂಗಳೂರು, ಎ.7: ಲಾಕ್‍ಡೌನ್ ಆದ ಹಿನ್ನೆಲೆಯಲ್ಲಿ ಶಿಬಿರಗಳಲ್ಲಿ ವಾಸಿಸುತ್ತಿರುವ ವಲಸೆ ಬಂದ ಕಾರ್ಮಿಕರಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ರಾಜ್ಯ ಸರಕಾರ, ಬಿಬಿಎಂಪಿ ಹಾಗೂ ನಗರ ಸ್ಥಳೀಯ ಪ್ರಾಧಿಕಾರಗಳಿಗೆ ಹೈಕೋರ್ಟ್ ಸೂಚನೆ ನೀಡಿದೆ.

ವಲಸೆ ಕಾರ್ಮಿಕರ ಕುರಿತು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ, ಶಿಬಿರಗಳಲ್ಲಿ ವಾಸಿಸುತ್ತಿರುವ ವಲಸೆ ಕಾರ್ಮಿಕರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರವನ್ನೂ ಬೇಡಬೇಕೆಂದು ರಾಜ್ಯ ಸರಕಾರಕ್ಕೆ ಸೂಚನೆ ನೀಡಿತು.

ರಾಜ್ಯ ಕಾನೂನು ಸೇವಾ ಪ್ರಾಧಿಕಾರ ಹೇಳಿರುವಂತೆ ವಲಸೆ ಕಾರ್ಮಿಕರು, ಮನೆ ಇಲ್ಲದವರಿಗೆ  ಸಮುದಾಯ ಭವನ, ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ವಾಸಿಸಲು ತಾತ್ಕಾಲಿಕ ಅವಕಾಶ ಕಲ್ಪಿಸಿಕೊಡುವ ಬಗ್ಗೆ ಪರಿಗಣಿಸಬೇಕೆಂದು ಸರಕಾರಕ್ಕೆ ಸೂಚನೆ ನೀಡಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯೆ ಅವರು ವಾದಿಸಿ, ವಲಸೆ ಕಾರ್ಮಿಕರಿಗೆ ಹಾಗೂ ಮನೆ ಇಲ್ಲದವರಿಗೆ ಬಸ್ ನಿಲ್ದಾಣ ಹಾಗೂ ರೈಲ್ವೆ ನಿಲ್ದಾಣಗಳಲ್ಲಿ ಅವಕಾಶವಿಲ್ಲ ಎಂದು ಪೀಠಕ್ಕೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News