ಲಾಕ್‌ಡೌನ್ ಉಲ್ಲಂಘನೆ: ಉಡುಪಿ ಜಿಲ್ಲೆಯಾದ್ಯಂತ 210 ವಾಹನಗಳು ವಶ

Update: 2020-04-07 16:47 GMT

ಉಡುಪಿ, ಎ.7: ಉಡುಪಿ ಜಿಲ್ಲೆಯಾದ್ಯಂತ ಕೊರೋನ ಲಾಕ್‌ಡೌನ್ ಆದೇಶವನ್ನು ಉಲ್ಲಂಘಿಸಿ ಅನವಶ್ಯಕವಾಗಿ ಸಂಚರಿಸುತ್ತಿದ್ದ ಒಟ್ಟು 210 ವಾಹನ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಯಾವುದೇ ವ್ಯಕ್ತಿಗಳು ಹಾಗೂ ವಾಹನಗಳು ಅನವಶ್ಯಕವಾಗಿ ತಿರುಗಾಡದಂತೆ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಆದೇಶ ನೀಡಿತ್ತು. ಈ ನಿಟ್ಟಿನಲ್ಲಿ ಪೊಲೀಸರು ಜಿಲ್ಲೆಯಾದ್ಯಂತ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನ ತಪಾಸಣೆಯನ್ನು ನಡೆಸುತ್ತಿದ್ದಾರೆ.

ಹೀಗೆ ಕಳೆದ 15 ದಿನಗಳಿಂದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಅನವಶ್ಯಕವಾಗಿ ತಿರುಗಾಡುತ್ತಿದ್ದ 87 ದ್ವಿಚಕ್ರ ವಾಹನಗಳು, 16 ತ್ರಿಚಕ್ರ ವಾಹನಗಳು ಮತ್ತು 24 ಕಾರು ಸಹಿತ ಇತರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.

ಅದೇ ರೀತಿ ಜಿಲ್ಲೆಯ ವಿವಿಧ ಕಡೆಗಳಲ್ಲಿ ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ವಹಿಸದೆ, ವಿನಾಕಾರಣ ತಿರುಗಾಡು ತ್ತಿದ್ದವರ ವಿರುದ್ಧ ಒಟ್ಟು 11 ಪ್ರಕರಣಗಳನ್ನು ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಿಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News