ಲಾಕ್‌ಡೌನ್ ಜಾರಿಗೆ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ: 150 ಜನರ ವಿರುದ್ಧ ಎಫ್‌ಐಆರ್

Update: 2020-04-07 17:26 GMT

ಲಕ್ನೊ, ಎ.7: ಉತ್ತರಪ್ರದೇಶದ ಬರೇಲಿಯಲ್ಲಿ ಲಾಕ್‌ಡೌನ್ ಜಾರಿಗೆ ಕ್ರಮ ಕೈಗೊಳ್ಳುತ್ತಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ 150 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಲಾಕ್‌ಡೌನ್ ನಿಯಮ ಪಾಲಿಸುವಂತೆ ಸೂಚಿಸುತ್ತಿದ್ದ ಪೊಲೀಸರ ಮೇಲೆ ಸುಮಾರು 150 ಜನರಿದ್ದ ತಂಡ ಹಲ್ಲೆ ನಡೆಸಿದ್ದು ಘಟನೆಗೆ ಸಂಬಂಧಿಸಿ 42 ಜನರನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೂವರು ಮಹಿಳೆಯರನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಲಾಗಿದೆ.

ಇಝ್ಝತ್‌ ನಗರದ ಕರಂಪುರ ಚೌಧುರಿ ಪ್ರದೇಶದಲ್ಲಿ ಇಬ್ಬರು ಪೊಲೀಸರು ಲಾಕ್‌ಡೌನ್ ನಿಯಮ ಪಾಲಿಸುವಂತೆ ಸೂಚಿಸಿದಾಗ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿ ಪೊಲೀಸ್ ಹೊರಠಾಣೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿದೆ. ಹೆಚ್ಚುವರಿ ಪೊಲೀಸರೊಂದಿಗೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದಾಗ ಅವರ ಮೇಲೂ ಹಲ್ಲೆ ನಡೆಸಲು ಪ್ರಯತ್ನ ನಡೆದಿದ್ದು ಪೊಲೀಸ್ ಅಧಿಕಾರಿ ಅಭಿಷೇಕ್ ವರ್ಮಗೆ ಗಾಯವಾಗಿದೆ. ಆಗ ಲಾಠೀಚಾರ್ಜ್ ನಡೆಸಿ ಗುಂಪನ್ನು ಚದುರಿಸಲಾಗಿದೆ ಎಂದು ವರದಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News