ಚಿಕ್ಕಮಗಳೂರು: ಒಂದೇ ದಿನ 11 ಶಂಕಿತರ ರಕ್ತ, ಗಂಟಲ ದ್ರವ ಪ್ರಯೋಗಾಲಕ್ಕೆ

Update: 2020-04-07 17:50 GMT

ಚಿಕ್ಕಮಗಳೂರು, ಎ. 7: ಒಂದೇ ದಿನ ಜಿಲ್ಲೆಯ 11 ಮಂದಿಯ ರಕ್ತದ ಮಾದರಿ ಮತ್ತು ಗಂಟಲ ದ್ರವವನ್ನು ವೈದ್ಯಕೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ತಿಳಿಸಿದೆ.

ಕೊರೊನಾ ಸೋಂಕು ಶಂಕೆ ಹಿನ್ನೆಲೆಯಲ್ಲಿ 11 ರಕ್ತದ ಮಾದರಿ ಮತ್ತು ಗಂಟಲ ದ್ರವ ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದು, ಬುಧವಾರ ವರದಿ ವೈದ್ಯರ ಕೈ ಸೇರಲಿದೆ. ಜಿಲ್ಲೆಯಲ್ಲಿ ಇದುವರೆಗೂ 273 ಮಂದಿಯನ್ನು ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. 259 ಮಂದಿ ಮನೆಯಲ್ಲೇ ವೈದ್ಯರ ನಿಗಾದಲ್ಲಿದ್ದಾರೆ. ಇದುವರೆಗೂ 100 ಮಂದಿ ಹದಿನಾಲ್ಕು ದಿನಗಳ ನಿಗಾ ಅವಧಿಯನ್ನು ಪೂರ್ಣಗೊಳಿಸಿದ್ದಾರೆ.

ಇದುವರೆಗೂ 24 ಮಂದಿಯ ರಕ್ತದ ಮಾದರಿ ಸಂಗ್ರಹಿಸಿದ್ದು, 13 ಮಂದಿಯ ವರದಿ ನೆಗೆಟಿವ್ ಬಂದಿದೆ. ಮಂಗಳವಾರ ಒಂದೇ ದಿನ 11 ಮಂದಿಯ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಬುಧವಾರ ವರದಿ ಬರಲಿದೆ. ಇದುವರೆಗೂ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳ ವರದಿ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News